IPL 2024: RCBಗೆ ಮಾಡು ಇಲ್ಲವೇ ಮಡಿ ಪಂದ್ಯ: ಡೆಲ್ಲಿ ಕ್ಯಾಪಿಟಲ್ಸ್​ಗೆ ಮತ್ತೊಂದು ಪಂದ್ಯ..!

|

Updated on: May 12, 2024 | 7:52 AM

IPL 2024 RCB vs DC: ಐಪಿಎಲ್​ 2024 ರಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಉಭಯ ತಂಡಗಳಿಗೂ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದರೆ ಒಟ್ಟು 14 ಪಾಯಿಂಟ್ಸ್ ಆಗಲಿದೆ. ಅದೇ ಡೆಲ್ಲಿ ಕ್ಯಾಪಿಟಲ್ಸ್ ತನ್ನ 2 ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ 16 ಅಂಕಗಳನ್ನು ಸಂಪಾದಿಸಲಿದೆ. ಹೀಗಾಗಿ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಇಂದಿನ ಪಂದ್ಯ ತುಂಬಾ ಮಹತ್ವದ್ದು.

1 / 6
ಐಪಿಎಲ್​ನಲ್ಲಿ (IPL 2024) ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಮುಂದಿನ ಹಂತಕ್ಕೇರಲು ಅವಕಾಶ ಹೊಂದಿರಲಿದೆ.

2 / 6
ಏಕೆಂದರೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 12 ಅಂಕಗಳನ್ನು ಹೊಂದಿದೆ. ಅತ್ತ ಆರ್​ಸಿಬಿ ಹೊಂದಿರುವುದು ಕೇವಲ 10 ಪಾಯಿಂಟ್ಸ್ ಮಾತ್ರ. ಹೀಗಾಗಿ ಫಾಫ್ ಡುಪ್ಲೆಸಿಸ್ ಪಡೆ ಇಂದು ಗೆದ್ದರೂ 12 ಅಂಕಗಳನ್ನು ಮಾತ್ರ ಕಲೆಹಾಕಲಿದೆ.

3 / 6
ಮತ್ತೊಂದೆಡೆ ಆರ್​ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋತರೂ 12 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ನೆಟ್ ರನ್ ರೇಟ್​ ಇಳಿಕೆಯಾದರೆ ಮಾತ್ರ ಅಂಕ ಪಟ್ಟಿಯಲ್ಲಿ ಆರ್​ಸಿಬಿಗಿಂತ ಕೆಳ ಸ್ಥಾನ ಪಡೆಯಲಿದೆ. ಇದಾಗ್ಯೂ ಪ್ಲೇಆಫ್ ರೇಸ್​ನಿಂದ ಹೊರಬೀಳುವುದಿಲ್ಲ.

4 / 6
ಬದಲಾಗಿ ಆರ್​ಸಿಬಿಯಂತೆ 14 ಅಂಕಗಳನ್ನು ಕಲೆಹಾಕಲು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನೊಂದು ಮ್ಯಾಚ್ ಕೂಡ ಇದೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಅವಕಾಶವನ್ನು ಎದುರು ನೋಡಬಹುದು.

5 / 6
ಒಂದು ವೇಳೆ ಇಂದು ಆರ್​ಸಿಬಿ ಸೋತರೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 14 ಅಂಕಗಳನ್ನು ಸಂಪಾದಿಸಲಿದೆ. ಮತ್ತೊಂದೆಡೆ ಆರ್​ಸಿಬಿ ಇಂದು ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೂ 12 ಅಂಕಗಳನ್ನು ಮಾತ್ರ ಹೊಂದಲಿದೆ.

6 / 6
ಹೀಗಾಗಿ ಇಂದಿನ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅದೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿರುವ ಮತ್ತೊಂದು ಪಂದ್ಯ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.