IPL 2024 RCB vs GT: ಮಳೆ ಬಂದರೂ ಮ್ಯಾಚ್ ನಡೆಯುವುದು ಖಚಿತ
TV9 Web | Updated By: ಝಾಹಿರ್ ಯೂಸುಫ್
Updated on:
May 04, 2024 | 9:20 AM
IPL 2024 RCB vs GT: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 4 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್ಸಿಬಿ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಗುಜರಾತ್ ಟೈಟಾನ್ಸ್ 2 ಮ್ಯಾಚ್ಗಳನ್ನು ಗೆದ್ದುಕೊಂಡಿದೆ. ಇನ್ನು ಕಳೆದ ಪಂದ್ಯದಲ್ಲಿ ಆರ್ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಗೆಲುವು ದಾಖಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ತಂಡವಾಗಿ ಆರ್ಸಿಬಿ ಗುರುತಿಸಿಕೊಂಡಿದೆ.
1 / 5
ಐಪಿಎಲ್ನ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಶುಕ್ರವಾರ ಬೆಂಗಳೂರಿನಾದ್ಯಂತ ಉತ್ತಮ ಮಳೆಯಾಗಿದ್ದು, ಹೀಗಾಗಿ ಶನಿವಾರ ಸಹ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
2 / 5
ವೆದರ್.ಕಾಮ್ ವರದಿ ಪ್ರಕಾರ ಬೆಂಗಳೂರಿನಲ್ಲಿ ಮಧ್ಯಾಹ್ನದ ಮೇಲೆ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ರಾತ್ರ 7.30 ರಿಂದ ಶುರುವಾಗಲಿದೆ.
3 / 5
ಒಂದು ವೇಳೆ ಮಳೆ ಬಂದರೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನವು ಸಬ್ ಏರ್ ಸಿಸ್ಟಂ ಹೊಂದಿದ್ದು, ಇದು ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು.
4 / 5
ಸತತವಾಗಿ 1 ಗಂಟೆ ಮಳೆಯಾದರೆ ಮೈದಾನದ ಒಳಗಿರುವ ಸಬ್ ಏರ್ ಸಿಸ್ಟಂ ಮೂಲಕ 10 ರಿಂದ 15 ನಿಮಿಷದೊಳಗೆ ಗ್ರೌಂಡ್ ಅನ್ನು ಸಿದ್ಧಗೊಳಿಸಬಹುದು. ಅಲ್ಲದೆ ಸಬ್ ಏರ್ ಸಿಸ್ಟಂ ಕೊಳವೆಗಳ ಮೂಲಕ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಶೀಘ್ರದಲ್ಲೇ ಒಣಗಿಸುವ ವ್ಯವಸ್ಥೆ ಕೂಡ ಇದೆ.
5 / 5
ಹಾಗಾಗಿ ಸತತ ಮಳೆ ಬಂದರೂ ಪಂದ್ಯ ನಡೆಸಲು ಕೆಲವು ಗಂಟೆಗಳು ಲಭ್ಯವಾದರೂ ಓವರ್ ಕಡಿತಗಳೊಂದಿಗೆ ಆರ್ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ನಡೆಯಲಿದೆ. ಹೀಗಾಗಿ ಇಂದು ಬೆಂಗಳೂರಿನಾದ್ಯಂತ ಮಳೆಯಾದರೂ RCB vs GT ಪಂದ್ಯ ನಡೆಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.