IPL 2024: RCB ಪಾಲಿಗೆ ಇಂದು ನಿರ್ಣಾಯಕ ಪಂದ್ಯ

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನಲ್ಲಿ ಜರುಗಲಿರುವ ಈ ಪಂದ್ಯವು ಸಂಜೆ 7.30 ರಿಂದ ಶುರುವಾಗಲಿದೆ. ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬೇಕಿದ್ದರೆ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಲೇಬೇಕು.

TV9 Web
| Updated By: ಝಾಹಿರ್ ಯೂಸುಫ್

Updated on: May 04, 2024 | 8:03 AM

ಐಪಿಎಲ್​ನ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ.

1 / 7
ಏಕೆಂದರೆ ಆರ್​ಸಿಬಿ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು.

2 / 7
ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾದರೆ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 7ನೇ ಅಥವಾ 8ನೇ ಸ್ಥಾನಕ್ಕೇರಲಿದೆ. ಅಂಕ ಪಟ್ಟಿಯಲ್ಲಿನ ಜಿಗಿತದೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು.

3 / 7
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ತಂಡದ ಪಾಲಿಗೂ ಈ ಪಂದ್ಯ ತುಂಬಾ ಮಹತ್ವದ್ದು. ಶುಭ್​ಮನ್ ಗಿಲ್ ಪಡೆ 10 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಇದೀಗ ಅಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಸೆಯನ್ನು ಜೀವಂತವರಿಸಿಕೊಳ್ಳಲು ಆರ್​ಸಿಬಿ ವಿರುದ್ಧ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

4 / 7
ಇನ್ನು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 200 ರನ್​ ಕಲೆಹಾಕಿದರೆ, ಆರ್​ಸಿಬಿ 16 ಓವರ್​ಗಳಲ್ಲಿ ಚೇಸ್ ಮಾಡಿ ಅಮೋಘ ಗೆಲುವು ದಾಖಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಸಿಬಿ ತಂಡ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಲ್, ಅನೂಜ್ ರಾವತ್, ಮಹಿಪಾಲ್ ಲೊಮ್ರೋರ್ , ಹಿಮಾಂಶು ಶರ್ಮಾ, ಆಕಾಶ್ ದೀಪ್, ವಿಜಯ್‌ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಟಾಮ್ ಕರನ್, ಲಾಕಿ ಫರ್ಗುಸನ್, ಮಯಾಂಕ್ ಡಾಗರ್, ಅಲ್ಝಾರಿ ಜೋಸೆಫ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೌರವ್ ಚೌಹಾಣ್, ರಜನ್ ಕುಮಾರ್.

6 / 7
ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಝ್ಮತುಲ್ಲಾ ಒಮಝಾಹಿ, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್, ಶರತ್ ಬಿಆರ್, ವಿಜಯ್ ಶಂಕರ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ಮ್ಯಾಥ್ಯೂ ವೇಡ್, ಉಮೇಶ್ ಯಾದವ್, ಕೇನ್ ವಿಲಿಯಮ್ಸನ್, ಜಯಂತ್ ಯಾದವ್, ಅಭಿನವ್ ಮನೋಹರ್, ಜೋಶುವಾ ಲಿಟಲ್, ಕಾರ್ತಿಕ್ ತ್ಯಾಗಿ, ಸ್ಪೆನ್ಸರ್ ಜಾನ್ಸನ್, ಸುಶಾಂತ್ ಮಿಶ್ರಾ.

7 / 7
Follow us
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ