Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯ RCB vs ಕನ್ನಡಿಗರು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಎರಡೂ ತಂಡಗಳಲ್ಲೂ ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಉಭಯ ತಂಡಗಳಲ್ಲಿ ಒಟ್ಟು ಕರ್ನಾಟಕದ ಐವರು ಆಟಗಾರರಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 02, 2024 | 3:52 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.

1 / 9
ಈ ಪಂದ್ಯವು ಆರ್​ಸಿಬಿ ವರ್ಸಸ್ ಕನ್ನಡಿಗರ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವುದು ಕರುನಾಡ ಕುವರ ಕೆಎಲ್ ರಾಹುಲ್.

2 / 9
ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹಾಗಿದ್ರೆ ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ ಎಂದು ನೋಡೋಣ...

3 / 9
ಕೆಎಲ್ ರಾಹುಲ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ನಮ್ಮ ಬೆಂಗಳೂರಿನ ಹುಡುಗ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಎಲ್​ಎಸ್​ಜಿ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್ ಮಾಜಿ ಆರ್​ಸಿಬಿ ಆಟಗಾರ ಎಂಬುದು ವಿಶೇಷ.

4 / 9
ದೇವದತ್ ಪಡಿಕ್ಕಲ್: ಆರ್​ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್​ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 9
ಕೃಷ್ಣಪ್ಪ ಗೌತಮ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್​ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್​ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು.

6 / 9
ವಿಜಯಕುಮಾರ್ ವೈಶಾಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲಿದ್ದಾರೆ.

7 / 9
ಮನೋಜ್ ಭಾಂಡಗೆ: ಕಳೆದ ಒಂದು ವರ್ಷದಿಂದ ಆರ್​ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್​ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

8 / 9
ಅಂದರೆ ಇಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಹೀಗಾಗಿಯೇ ಇಂದಿನ ಪಂದ್ಯವು RCB vs ಕನ್ನಡಿಗರ ಕದನವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.

9 / 9
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್

ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ