AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 35 ಸಿಕ್ಸ್, 46 ಫೋರ್: RCB ತಂಡಕ್ಕೆ ಕನ್ನಡಿಗನದ್ದೇ ಚಿಂತೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಕಠಿಣ ಎದುರಾಳಿ ಕನ್ನಡಿಗ ಕೆಎಲ್ ರಾಹುಲ್.

TV9 Web
| Edited By: |

Updated on:Apr 02, 2024 | 2:56 PM

Share
IPL 2024 RCB vs LSG: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಕದನ ನಡೆಯಲಿದೆ. ಅದು ಕೂಡ ಕರ್ನಾಟಕದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಎಂಬುದು ವಿಶೇಷ. ಹೀಗಾಗಿ ತವರು ಮೈದಾನದಲ್ಲಿ ಕೆಎಲ್ ರಾಹುಲ್​ಗೂ ಫುಲ್ ಸಪೋರ್ಟ್ ಕಂಡು ಬರಲಿದೆ.

1 / 6
ಇದುವೇ ಈಗ ಆರ್​ಸಿಬಿ ತಂಡದ ಚಿಂತೆಗೂ ಕಾರಣವಾಗಿದೆ. ಏಕೆಂದರೆ ಕೆಎಲ್ ರಾಹುಲ್ ಯಾವ ತಂಡದ ವಿರುದ್ಧ ಆಡುತ್ತರೋ ಗೊತ್ತಿಲ್ಲ. ಆದರೆ ಆರ್​ಸಿಬಿ ವಿರುದ್ಧ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವಿರುದ್ಧದ ಅವರ ಅಂಕಿ ಅಂಶಗಳೇ ಸಾಕ್ಷಿ.

2 / 6
ಏಕೆಂದರೆ ಕೆಎಲ್ ರಾಹುಲ್ ಇದುವರೆಗೆ ಆರ್​ಸಿಬಿ ವಿರುದ್ಧ ಒಟ್ಟು 14 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಬರೋಬ್ಬರಿ 628 ರನ್​ ಕಲೆಹಾಕಿದ್ದಾರೆ. ಹಾಗೆಯೇ ನಾಲ್ಕು ಬಾರಿ ಅಜೇಯರಾಗಿ ಕೂಡ ಉಳಿದಿದ್ದರು. ಅಂದರೆ ಆರ್​ಸಿಬಿ ವಿರುದ್ಧ ಕೆಎಲ್ ರಾಹುಲ್ 69.77 ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾರೆ.

3 / 6
ಇನ್ನು ಆರ್​ಸಿಬಿ ವಿರುದ್ಧ 144.03 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಕೆಎಲ್ ರಾಹುಲ್ 1 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೇ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು 46 ಫೋರ್​ಗಳು ಹಾಗೂ 35 ಸಿಕ್ಸ್​ಗಳು.

4 / 6
ಅಂದರೆ ಆರ್​ಸಿಬಿ ವಿರುದ್ಧದ 14 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಸಿಕ್ಸ್​ ಹಾಗೂ ಫೋರ್​ಗಳ ಮೂಲಕವೇ ಒಟ್ಟು 394 ರನ್​ ಬಾರಿಸಿದ್ದಾರೆ. ಇದೀಗ ಕೆಎಲ್ ರಾಹುಲ್ ತನ್ನ ತವರು ಮೈದಾನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

5 / 6
ಇತ್ತ ಆರ್​ಸಿಬಿ ಅಭಿಮಾನಿಗಳು ಕೂಡ ಕೆಎಲ್ ರಾಹುಲ್ ಕಡೆಯಿಂದ ಭರ್ಜರಿ ಇನಿಂಗ್ಸ್​ನ ನಿರೀಕ್ಷಿಸುತ್ತಿದ್ದಾರೆ. ಒಂದು ವೇಳೆ ಆರ್​ಸಿಬಿ ವಿರುದ್ಧ ಕೆಎಲ್​​ಆರ್ ಅಬ್ಬರಿಸಲಾರಂಭಿಸಿದರೆ ಪ್ರೇಕ್ಷಕರ ಗ್ಯಾಲರಿಯಿಂದ ಭರಪೂರ ಬೆಂಬಲ ವ್ಯಕ್ತವಾಗುವುದರಲ್ಲಿ ಅನುಮಾನವೇ ಇಲ್ಲ.

6 / 6

Published On - 2:53 pm, Tue, 2 April 24

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್