IPL 2024: ಇಂದಿನ ಪಂದ್ಯದಲ್ಲಿ RCB ಯಾಕೆ ಗೆಲ್ಲಲೇಬೇಕು ಅಂದರೆ…

IPL 2024 RCB vs SRH: ಐಪಿಎಲ್​ 2024 ರ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 15, 2024 | 11:09 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆಲ್ಲಲೇಬೇಕು. ಯಾಕೆಂದರೆ...

1 / 6
ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ಒಂದು ಸ್ಥಾನ ಮೇಲೇರಬಹುದು.

2 / 6
ಅಲ್ಲದೆ ದ್ವಿತೀಯಾರ್ಧದ ಆರಂಭಕ್ಕೂ ಮುನ್ನವೇ 4 ಅಂಕಗಳೊಂದಿಗೆ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅಂದರೆ ಎಸ್​ಆರ್​ಹೆಚ್ ವಿರುದ್ಧ ಗೆಲುವು ದಾಖಲಿಸಿದರೆ, ಆರ್​ಸಿಬಿ ಮುಂದಿನ 7 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.

3 / 6
ಅಥವಾ ದ್ವಿತೀಯಾರ್ಧದ 7 ಪಂದ್ಯಗಳಲ್ಲಿ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೊಂದಬಹುದು. ಹೀಗಾಗಿ ಮೊದಲಾರ್ಧದ ಕೊನೆಯ ಪಂದ್ಯವು ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಆರ್​ಸಿಬಿ ಗೆಲ್ಲಲೇಬೇಕು.

4 / 6
ಏಕೆಂದರೆ ಆರ್​ಸಿಬಿ ಈಗಾಗಲೇ ತವರಿನಲ್ಲಿ 3 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಮ್ಯಾಚ್​ಗಳಲ್ಲಿ ಸೋತರೆ, ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ತವರಿನಲ್ಲಿ ನಡೆಯುವ ಈ ನಾಲ್ಕು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ ಮಾತ್ರ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಇರಲಿದೆ.

5 / 6
ಹೀಗಾಗಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

6 / 6
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ