ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡವು ಗೆಲ್ಲಲೇಬೇಕು. ಯಾಕೆಂದರೆ...
ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್ಸಿಬಿ 5 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ಒಂದು ಸ್ಥಾನ ಮೇಲೇರಬಹುದು.
ಅಲ್ಲದೆ ದ್ವಿತೀಯಾರ್ಧದ ಆರಂಭಕ್ಕೂ ಮುನ್ನವೇ 4 ಅಂಕಗಳೊಂದಿಗೆ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅಂದರೆ ಎಸ್ಆರ್ಹೆಚ್ ವಿರುದ್ಧ ಗೆಲುವು ದಾಖಲಿಸಿದರೆ, ಆರ್ಸಿಬಿ ಮುಂದಿನ 7 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಹಂತಕ್ಕೇರಬಹುದು.
ಅಥವಾ ದ್ವಿತೀಯಾರ್ಧದ 7 ಪಂದ್ಯಗಳಲ್ಲಿ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೊಂದಬಹುದು. ಹೀಗಾಗಿ ಮೊದಲಾರ್ಧದ ಕೊನೆಯ ಪಂದ್ಯವು ಆರ್ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಈ ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಆರ್ಸಿಬಿ ಗೆಲ್ಲಲೇಬೇಕು.
ಏಕೆಂದರೆ ಆರ್ಸಿಬಿ ಈಗಾಗಲೇ ತವರಿನಲ್ಲಿ 3 ಪಂದ್ಯಗಳನ್ನಾಡಿದೆ. ಇದರಲ್ಲಿ 2 ಮ್ಯಾಚ್ಗಳಲ್ಲಿ ಸೋತರೆ, ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ತವರಿನಲ್ಲಿ ನಡೆಯುವ ಈ ನಾಲ್ಕು ಮ್ಯಾಚ್ಗಳಲ್ಲೂ ಜಯ ಸಾಧಿಸಿದರೆ ಮಾತ್ರ ಆರ್ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಇರಲಿದೆ.
ಹೀಗಾಗಿ ಎಸ್ಆರ್ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಬೇಕಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್ಸಿಬಿ ಪಡೆಯಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.