IPL 2024: SRH ವಿರುದ್ಧ ಕಣಕ್ಕಿಳಿದರೆ RCB ಹೆಸರಿಗೆ ಹೊಸ ದಾಖಲೆ

| Updated By: ಝಾಹಿರ್ ಯೂಸುಫ್

Updated on: Apr 25, 2024 | 10:22 AM

IPL 2024: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆಯಲಿದೆ. ಈ ಮೂಲಕ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ 2ನೇ ತಂಡ ಎನಿಸಿಕೊಳ್ಳಲಿದೆ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಮುಂಬೈ ಇಂಡಿಯನ್ಸ್. ಇದೀಗ ಹೊಸ ಮೈಲುಗಲ್ಲು ದಾಟಲು ಆರ್​ಸಿಬಿ ಕೂಡ ಸಜ್ಜಾಗಿ ನಿಂತಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ವಿಶೇಷ ದಾಖಲೆ ಬರೆಯಲಿದೆ.

2 / 5
ಅಂದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಆರ್​ಸಿಬಿ ಐಪಿಎಲ್​ನಲ್ಲಿ 250 ಪಂದ್ಯಗಳನ್ನಾಡಿದ ಸಾಧನೆ ಮಾಡಲಿದೆ. ಈ ಮೂಲಕ ಈ ಮೈಲುಗಲ್ಲು ತಲುಪಿದ 2ನೇ ತಂಡ ಎನಿಸಿಕೊಳ್ಳಲಿದೆ.

3 / 5
ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಐಪಿಎಲ್​ನಲ್ಲಿ 250 ಪಂದ್ಯಗಳನ್ನಾಡಿ ಇತಿಹಾಸ ನಿರ್ಮಿಸಿದೆ. ಈವರೆಗೆ 255 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 141 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 110 ಪಂದ್ಯಗಳಲ್ಲಿ ಸೋಲನುಭವಿಸಿದರೆ, 4 ಪಂದ್ಯಗಳು ಫಲಿತಾಂಶರಹಿತವಾಗಿತ್ತು.

4 / 5
ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನಲ್ಲಿ 250ನೇ ಪಂದ್ಯವಾಡಲು ಸಜ್ಜಾಗಿದೆ. ಈವರೆಗೆ 249 ಪಂದ್ಯಗಳನ್ನಾಡಿರುವ ಆರ್​ಸಿಬಿ 115 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 127 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು 7 ಪಂದ್ಯಗಳು ಫಲಿತಾಂಶರಹಿವಾಗಿತ್ತು.

5 / 5
ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ಆರ್​ಸಿಬಿ 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ. ಇದೀಗ 250ನೇ ಮೈಲುಗಲ್ಲಿನ ಪಂದ್ಯದೊಂದಿಗೆ ಕಣಕ್ಕಿಳಿಯುತ್ತಿರುವ ಆರ್​ಸಿಬಿ ಈ ಬಾರಿ ಗೆಲುವಿನ ನಗೆ ಬೀರಲಿದೆಯಾ ಕಾದು ನೋಡಬೇಕಿದೆ.