AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡದ ಹೆಸರು ಬದಲಾವಣೆ..?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಕಳೆದ ಬಾರಿ ವಿನ್ನರ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್​ ಈ ಬಾರಿ ಕೂಡ ಮೊದಲ ಪಂದ್ಯವನ್ನಾಡಲಿದೆ. ಆದರೆ ಐಪಿಎಲ್ 2023 ರ ರನ್ನರ್ ಅಪ್ ಗುಜರಾತ್ ಟೈಟಾನ್ಸ್ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ.

TV9 Web
| Edited By: |

Updated on:Mar 13, 2024 | 12:20 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೂ ಮುನ್ನ RCB ಯಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಹೊಸ ಹೆಸರಿನೊಂದಿಗೆ ಕಣಕ್ಕಿಳಿಯಲಿದೆ ಎಂದು ತಿಳಿದು ಬಂದಿದೆ.

1 / 6
ಹೌದು, ಈ ಬಾರಿ ಆರ್​ಸಿಬಿ ತಂಡವು ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಮಾರ್ಚ್ 19 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ಹೆಸರು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಎಂದು ಘೋಷಣೆಯಾಗಲಿದೆ ಎಂದು ವರದಿಯಾಗಿದೆ.

2 / 6
ಈ ಹಿಂದಿನಿಂದಲೂ ಆರ್​ಸಿಬಿ ಅಭಿಮಾನಿಗಳು ಬ್ಯಾಂಗಲೂರ್ ಬದಲಿಗೆ ಬೆಂಗಳೂರು ಬಳಸುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿ ಸಲ್ಲಿಸುತ್ತಾ ಬಂದಿದ್ದರು. ಇದೀಗ ಅಭಿಮಾನಿಗಳ ಬಹುಕಾಲದ ಈ ಬೇಡಿಕೆಯನ್ನು ಈಡೇರಿಸಲು ಆರ್​ಸಿಬಿ ಫ್ರಾಂಚೈಸಿ ಮುಂದಾಗಿದೆ.

3 / 6
ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ಆರ್​ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ಹೊಸ ಹೆಸರಿನೊಂದಿಗೆ ಐಪಿಎಲ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.

4 / 6
ಬಹುನಿರೀಕ್ಷಿತ ಐಪಿಎಲ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6

Published On - 12:04 pm, Wed, 13 March 24