- Kannada News Photo gallery Cricket photos IPL 2024: RCB will either meet Rajasthan Royals or SRH in the eliminator
IPL 2024: RCB ತಂಡದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಮಾಹಿತಿ
IPL 2024: ಐಪಿಎಲ್ನ 68 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕಗಳನ್ನು ಕಲೆಹಾಕಿದರೆ, ಸನ್ರೈಸರ್ಸ್ ಹೈದರಾಬಾದ್ ತಂಡ 15 ಅಂಕಗಳನ್ನು ಗಳಿಸಿದೆ. ಉಭಯ ತಂಡಗಳಿಗೂ ಇನ್ನೂ ಒಂದು ಪಂದ್ಯವಿದ್ದು, ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ 2ನೇ ಸ್ಥಾನಕ್ಕೇರಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದರೆ, ಮೇ 22 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಲಿದೆ.
Updated on:May 19, 2024 | 2:23 PM

IPL 2024: ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ಗೆ (CSK) ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ.

ಏಕೆಂದರೆ ಆರ್ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್ಸಿಬಿ ತಂಡಕ್ಕೆ ಆರ್ಆರ್ ಎದುರಾಳಿಯಾಗಿ ಸಿಗಲಿದೆ.

ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್ಸಿಬಿ ತಂಡದ ಎದುರಾಳಿ ಎಸ್ಆರ್ಹೆಚ್ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಇಂದು ಮಧ್ಯಾಹ್ನ ನಡೆಯಲಿರುವ ಸನ್ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್ಸಿಬಿ ಎಸ್ಆರ್ಹೆಚ್ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.
Published On - 7:52 am, Sun, 19 May 24




