
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿರುವ 8 ಆಟಗಾರರು ಆಯ್ಕೆಯಾಗಿದ್ದಾರೆ. ಆ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ಭಾರತ: ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಆರ್ಸಿಬಿ ಟೀಮ್ನಿಂದ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಇಬ್ಬರು ಆಟಗಾರರು ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ: 15 ಸದಸ್ಯರ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡದಲ್ಲಿ ಸ್ವಿಚ್ ಹಿಟ್ ಸ್ಪೆಷಲಿಸ್ಟ್ ಗ್ಲೆನ್ ಮ್ಯಾಕ್ಸ್ವೆಲ್ ಸ್ಥಾನ ಪಡೆದಿದ್ದಾರೆ. ಮ್ಯಾಕ್ಸ್ವೆಲ್ ಜೊತೆಗೆ ಆರ್ಸಿಬಿ ತಂಡದ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಕೂಡ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್: ಟಿ20 ವಿಶ್ವಕಪ್ 2024 ಕ್ಕಾಗಿ ಇಂಗ್ಲೆಂಡ್ ತಂಡವನ್ನು ಕೂಡ ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಹಾಗೂ ಎಡಗೈ ವೇಗಿ ರೀಸ್ ಟೋಪ್ಲಿ ಸ್ಥಾನ ಪಡೆದಿದ್ದಾರೆ.

ನ್ಯೂಝಿಲೆಂಡ್: ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾದ ನ್ಯೂಝಿಲೆಂಡ್ ತಂಡದಲ್ಲಿ ವೇಗದ ಬೌಲರ್ ಲಾಕಿ ಫರ್ಗುಸನ್ ಸ್ಥಾನ ಪಡೆದಿದ್ದಾರೆ.

ಅಲ್ಝಾರಿ ಜೋಸೆಫ್: ವೆಸ್ಟ್ ಇಂಡೀಸ್ ಕೂಡ ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಬಳಗವನ್ನು ಘೋಷಿಸಿದೆ. ಈ ತಂಡದಲ್ಲಿ ವೇಗದ ಬೌಲರ್ ಅಲ್ಝಾರಿ ಜೋಸೆಫ್ ಕಾಣಿಸಿಕೊಂಡಿದ್ದಾರೆ.

ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗದ RCB ಆಟಗಾರರು: (ಭಾರತ) ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಯಶ್ ದಯಾಲ್, ಅನೂಜ್ ರಾವತ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೌರವ್ ಚೌಹಾಣ್, ರಜನ್ ಕುಮಾರ್, ಹಿಮಾಂಶು ಶರ್ಮಾ, ಆಕಾಶ್ ದೀಪ್, ವಿಜಯ್‌ಕುಮಾರ್ ವೈಶಾಕ್, ಮಯಾಂಕ್ ಡಾಗರ್. ಫಾಫ್ ಡು ಪ್ಲೆಸಿಸ್ (ಸೌತ್ ಆಫ್ರಿಕಾ), ಟಾಮ್ ಕರನ್ (ಇಂಗ್ಲೆಂಡ್).