IPL 2024: ಒಂದು ರನ್​ಗೆ 21 ಲಕ್ಷ ರೂ: ಇದು ಮ್ಯಾಕ್ಸ್​ವೆಲ್ ಆಟ..!

IPL 2024 RCB vs RR: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡ ಸೋಲನುಭವಿಸಿದೆ. ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 4 ವಿಕೆಟ್​ಗಳ ಜಯ ಸಾಧಿಸಿ, ಕ್ವಾಲಿಫೈಯರ್-2 ಹಂತಕ್ಕೇರಿದರೆ, ಆರ್​ಸಿಬಿ ಐಪಿಎಲ್​ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಆರ್​ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಪ್ರದರ್ಶನದ ಬಗ್ಗೆ ಚರ್ಚೆಗಳು ಶುರುವಾಗಿದೆ.

|

Updated on: May 23, 2024 | 1:58 PM

IPL 2024: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell). ಟೂರ್ನಿಯ ಆರಂಭದಿಂದ ಶುರುವಾದ ಈ ವೈಫಲ್ಯವು ಅಂತಿಮ ಪಂದ್ಯದವರೆಗೂ ಮುಂದುವರೆದದ್ದು ಮಾತ್ರ ವಿಪರ್ಯಾಸ.

1 / 5
ಅದರಲ್ಲೂ ನಿರ್ಣಾಯಕ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಗೋಲ್ಡನ್ ಡಕ್​ಗೆ ಔಟಾಗಿದ್ದರು. ಇದಾದ ಬಳಿಕ 5ನೇ ಓವರ್​ನಲ್ಲಿ ಸುಲಭ ಕ್ಯಾಚ್​ವೊಂದನ್ನು ಕೈಚೆಲ್ಲಿದ್ದರು. ಒಂದು ವೇಳೆ ಟಾಮ್ ಕೊಹ್ಲರ್​ ಅವರ ಈ ಕ್ಯಾಚ್ ಹಿಡಿದಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲೇ ಒತ್ತಡಕ್ಕೊಳಗಾಗುತ್ತಿತ್ತು. ಆದರೆ ಅತ್ತ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದ ಮ್ಯಾಕ್ಸ್​ವೆಲ್ ಫೀಲ್ಡಿಂಗ್​ನಲ್ಲೂ ಆರ್​ಸಿಬಿ ಪಾಲಿಗೆ ದುಬಾರಿಯಾದರು.

2 / 5
ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಕೊಡುಗೆ ಕೇವಲ 52 ರನ್​ಗಳು. ಅಂದರೆ 10 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಕ್ಸಿ 5.78 ಸರಾಸರಿಯಂತೆ ಕೇವಲ 52 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ಒಂದೇ ಸೀಸನ್​ನಲ್ಲಿ 5 ಬಾರಿ ಸೊನ್ನೆಗೆ ಔಟಾಗಿದ್ದಾರೆ ಎಂದರೆ ನಂಬಲೇಬೇಕು.

3 / 5
ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಗ್ಲೆನ್ ಮ್ಯಾಕ್ಸ್​ವೆಲ್​ಗಾಗಿ ಆರ್​ಸಿಬಿ ನೀಡುತ್ತಿರುವ ಸಂಭಾವನೆ. ಅಂದರೆ ಈ ಸೀಸನ್​ಗಾಗಿ ಮ್ಯಾಕ್ಸ್​ವೆಲ್ ಪಡೆದಿರುವುದು ಬರೋಬ್ಬರಿ 11 ಕೋಟಿ ರೂ. ಅಂದರೆ ಕೇವಲ 52 ರನ್​ ಕಲೆಹಾಕಿರುವ ಮ್ಯಾಕ್ಸ್​ವೆಲ್ ಪ್ರತಿ ರನ್​ಗೆ ಮೊತ್ತ 21 ಲಕ್ಷ ರೂ. ಪಡೆದಿದ್ದಾರೆ.

4 / 5
ಇನ್ನು ಬೌಲಿಂಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಿಂದ ಕೇವಲ 6 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಅಂದರೆ ಆಲ್​ರೌಂಡರ್ ಆಗಿ ಮ್ಯಾಕ್ಸ್​ವೆಲ್ ಸಂಪೂರ್ಣ ವಿಫಲರಾಗಿದ್ದಾರೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಕೈ ಕೊಡುವ ಮೂಲಕ ಆರ್​ಸಿಬಿ ತಂಡದ ಸೋಲಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಪ್ರಮುಖ ಕಾರಣಕರ್ತರಾಗಿದ್ದಾರೆ.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್