IPL 2024: ‘ಪವರ್’ಫುಲ್ ದಾಖಲೆ ಬರೆದ RCB
TV9 Web | Updated By: ಝಾಹಿರ್ ಯೂಸುಫ್
Updated on:
May 05, 2024 | 7:38 AM
IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಆರ್ಸಿಬಿ ತಂಡ ಜಯ ಸಾಧಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡವು 13.4 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್ಗಳ ಜಯ ಸಾಧಿಸಿದೆ.
1 / 6
ಐಪಿಎಲ್ನ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪವರ್ಪ್ಲೇನಲ್ಲಿ ಪವರ್ಫುಲ್ ದಾಖಲೆ ಬರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.
2 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಆರ್ಸಿಬಿ ದಾಳಿಗೆ ತತ್ತರಿಸಿತು. ಪರಿಣಾಮ 19.3 ಓವರ್ಗಳಲ್ಲಿ ಕೇವಲ 147 ರನ್ಗಳಿಸಿ ಆಲೌಟ್ ಆಯಿತು. 148 ರನ್ಗಳ ಸುಲಭ ಗುರಿ ಪಡೆದ ಆರ್ಸಿಬಿ ತಂಡಕ್ಕೆ ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಸ್ಪೋಟಕ ಆರಂಭ ಒದಗಿಸಿದ್ದರು.
3 / 6
ಮೊದಲ ಓವರ್ನಿಂದಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ ಕಿಂಗ್ ಕೊಹ್ಲಿ ಸಿಕ್ಸ್ನೊಂದಿಗೆ ಆರ್ಸಿಬಿ ತಂಡದ ಸ್ಕೋರ್ ಖಾತೆ ತೆರೆದಿದ್ದರು. ಮತ್ತೊಂದೆಡೆ ಫಾಫ್ ಡುಪ್ಲೆಸಿಸ್ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಗುಜರಾತ್ ಟೈಟಾನ್ಸ್ ತಂಡದ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಈ ಜೋಡಿ 3.1 ಓವರ್ಗಳಲ್ಲಿ ತಂಡದ ಮೊತ್ತವನ್ನು 50ರ ಗಡಿದಾಟಿಸಿದರು.
4 / 6
ಆ ಬಳಿಕ ಕೂಡ ಆರ್ಭಟ ಮುಂದುವರೆಸಿದ ಫಾಫ್ ಡುಪ್ಲೆಸಿಸ್ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪವರ್ಪ್ಲೇ ಮುಕ್ತಾಯದ ವೇಳೆಗೆ ಆರ್ಸಿಬಿ ಬರೋಬ್ಬರಿ 92 ರನ್ ಕಲೆಹಾಕಿತು. ಈ ರನ್ಗಳೊಂದಿಗೆ ಹೊಸ ದಾಖಲೆ ಬರೆಯುವಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಜೋಡಿ ಯಶಸ್ವಿಯಾದರು.
5 / 6
ಅಂದರೆ ಇದು ಪವರ್ಪ್ಲೇನಲ್ಲಿ ಆರ್ಸಿಬಿ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್. ಇದಕ್ಕೂ ಮುನ್ನ ಆರ್ಸಿಬಿ ತಂಡ ಮೊದಲ ಓವರ್ನಲ್ಲಿ 79 ರನ್ಗಳಿಸಿದ್ದು ದಾಖಲೆಯಾಗಿತ್ತು. 2011 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ಹಾಗೂ 2024 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ಸಿಬಿ ಪವರ್ಪ್ಲೇನಲ್ಲಿ 79 ರನ್ ಬಾರಿಸಿದ್ದರು.
6 / 6
ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲ 6 ಓವರ್ಗಳಲ್ಲೇ 92 ರನ್ ಸಿಡಿಸುವ ಮೂಲಕ ಆರ್ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಆರ್ಸಿಬಿ ತಂಡಕ್ಕೆ ಪವರ್ಫುಲ್ ಆರಂಭ ಒದಗಿಸಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ.