IPL 2024: RCB ಮುಂದಿದೆ 5 ಕಠಿಣ ಸವಾಲು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆಡಿರುವ 4 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದ್ದು ಬಿಟ್ಟರೆ, ಉಳಿದ ಮೂರು ಪಂದ್ಯಗಳಲ್ಲೂ ಆರ್​ಸಿಬಿ ಮುಗ್ಗರಿಸಿದೆ. ಇದೀಗ 5ನೇ ಪಂದ್ಯಕ್ಕೆ ಸಜ್ಜಾಗಿರುವ ಆರ್​ಸಿಬಿ ಅವೇ ಪಂದ್ಯಗಳ ಚಿಂತೆ ಶುರುವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 03, 2024 | 12:52 PM

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್-17 ರಲ್ಲಿ ಹೊಸ ಅಧ್ಯಾಯ ಆರಂಭಿಸುವ ಇರಾದೆಯೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೊದಲ 4 ಪಂದ್ಯಗಳಲ್ಲೇ 3 ಮ್ಯಾಚ್ ಸೋತಿದೆ. ಈ ಮೂರು ಮ್ಯಾಚ್​ಗಳಲ್ಲಿ 2 ಪಂದ್ಯಗಳನ್ನು ತವರಿನಲ್ಲೇ ಸೋತಿರುವುದು ಅಚ್ಚರಿ.

1 / 10
ಏಕೆಂದರೆ ತವರು ಮೈದಾನದಲ್ಲಿ ಕಣಕ್ಕಿಳಿದಾಗ ಅಭಿಮಾನಿಗಳಿಂದ ಭರ್ಜರಿ ಬೆಂಬಲ ಸಿಗುತ್ತದೆ. ಅಲ್ಲದೆ ಹೋಮ್​ ಗ್ರೌಂಡ್​ನಲ್ಲಿ ಆಡಿದ ಹೆಚ್ಚಿನ ಅನುಭವ ಕೂಡ ಹೊಂದಿರುತ್ತಾರೆ. ಇದಾಗ್ಯೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಆರ್​ಸಿಬಿ ಹೀನಾಯವಾಗಿ ಸೋಲನುಭವಿಸಿದೆ.

2 / 10
ಇನ್ನು ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 6 ರಂದು ಆಡಲಿದೆ. ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ತಂಡದ ತವರು ಮೈದಾನ ಸವಾಯ್​ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಲ್ಲದೆ ಆರ್​ಸಿಬಿ ತನ್ನ ಮುಂದಿನ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಎದುರಾಳಿಯ ಹೋಮ್​ ಗ್ರೌಂಡ್​ನಲ್ಲಿ ಆಡಬೇಕಿದೆ. ಆರ್​ಸಿಬಿ ತಂಡದ ಮುಂದಿನ 5 ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

3 / 10
RR vs RCB: ಏಪ್ರಿಲ್ 6 ರಂದು ಜೈಪುರದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಜೈಪುರದ ಸವಾಯ್​ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 10
MI vs RCB: ಏಪ್ರಿಲ್ 11 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯಲಿದೆ.

5 / 10
RCB vs SRH: ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.

6 / 10
KKR vs RCB: ಏಪ್ರಿಲ್ 21 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿರುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

7 / 10
SRH vs RCB: ಏಪ್ರಿಲ್ 25 ರಂದು ಆರ್​ಸಿಬಿ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.

8 / 10
ಅಂದರೆ ಇಲ್ಲಿ ಮುಂದಿನ ಐದು ಪಂದ್ಯಗಳಲ್ಲಿ ಆರ್​ಸಿಬಿ ತವರಿನಲ್ಲಿ ಆಡಲಿರುವುದು ಕೇವಲ 1 ಪಂದ್ಯವನ್ನು ಮಾತ್ರ. ಉಳಿದ 4 ಮ್ಯಾಚ್​ಗಳನ್ನು ಎದುರಾಳಿ ತಂಡಗಳ ಹೋಮ್​ಗ್ರೌಂಡ್​ನಲ್ಲಿ ಆಡಬೇಕಿದೆ.

9 / 10
ಈಗಾಗಲೇ ನಾಲ್ಕು ಪಂದ್ಯಗಳನ್ನಾಡಿರುವ ಆರ್​ಸಿಬಿಗೆ ಮುಂದಿನ 5 ಪಂದ್ಯಗಳು ಮುಖ್ಯವಾಗಿದ್ದು, ಈ ಪಂದ್ಯಗಳಲ್ಲಿ ಸೋಲನುಭವಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಳ್ಳಬಹುದು. ಹೀಗಾಗಿ ಎದುರಾಳಿಗಳ ಹೋಮ್​ಗ್ರೌಂಡ್​ನಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆರ್​ಸಿಬಿ.

10 / 10
Follow us
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ