IPL 2024: RCB ಮುಂದಿದೆ 5 ಕಠಿಣ ಸವಾಲು..!
TV9 Web | Updated By: ಝಾಹಿರ್ ಯೂಸುಫ್
Updated on:
Apr 03, 2024 | 12:52 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಆಡಿರುವ 4 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದ್ದು ಬಿಟ್ಟರೆ, ಉಳಿದ ಮೂರು ಪಂದ್ಯಗಳಲ್ಲೂ ಆರ್ಸಿಬಿ ಮುಗ್ಗರಿಸಿದೆ. ಇದೀಗ 5ನೇ ಪಂದ್ಯಕ್ಕೆ ಸಜ್ಜಾಗಿರುವ ಆರ್ಸಿಬಿ ಅವೇ ಪಂದ್ಯಗಳ ಚಿಂತೆ ಶುರುವಾಗಿದೆ.
1 / 10
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಲ್ಲಿ ಹೊಸ ಅಧ್ಯಾಯ ಆರಂಭಿಸುವ ಇರಾದೆಯೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೊದಲ 4 ಪಂದ್ಯಗಳಲ್ಲೇ 3 ಮ್ಯಾಚ್ ಸೋತಿದೆ. ಈ ಮೂರು ಮ್ಯಾಚ್ಗಳಲ್ಲಿ 2 ಪಂದ್ಯಗಳನ್ನು ತವರಿನಲ್ಲೇ ಸೋತಿರುವುದು ಅಚ್ಚರಿ.
2 / 10
ಏಕೆಂದರೆ ತವರು ಮೈದಾನದಲ್ಲಿ ಕಣಕ್ಕಿಳಿದಾಗ ಅಭಿಮಾನಿಗಳಿಂದ ಭರ್ಜರಿ ಬೆಂಬಲ ಸಿಗುತ್ತದೆ. ಅಲ್ಲದೆ ಹೋಮ್ ಗ್ರೌಂಡ್ನಲ್ಲಿ ಆಡಿದ ಹೆಚ್ಚಿನ ಅನುಭವ ಕೂಡ ಹೊಂದಿರುತ್ತಾರೆ. ಇದಾಗ್ಯೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ಸಿಬಿ ಹೀನಾಯವಾಗಿ ಸೋಲನುಭವಿಸಿದೆ.
3 / 10
ಇನ್ನು ಆರ್ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 6 ರಂದು ಆಡಲಿದೆ. ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ತಂಡದ ತವರು ಮೈದಾನ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಲ್ಲದೆ ಆರ್ಸಿಬಿ ತನ್ನ ಮುಂದಿನ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಎದುರಾಳಿಯ ಹೋಮ್ ಗ್ರೌಂಡ್ನಲ್ಲಿ ಆಡಬೇಕಿದೆ. ಆರ್ಸಿಬಿ ತಂಡದ ಮುಂದಿನ 5 ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...
4 / 10
RR vs RCB: ಏಪ್ರಿಲ್ 6 ರಂದು ಜೈಪುರದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ.
5 / 10
MI vs RCB: ಏಪ್ರಿಲ್ 11 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯಲಿದೆ.
6 / 10
RCB vs SRH: ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.
7 / 10
KKR vs RCB: ಏಪ್ರಿಲ್ 21 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿರುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.
8 / 10
SRH vs RCB: ಏಪ್ರಿಲ್ 25 ರಂದು ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.
9 / 10
ಅಂದರೆ ಇಲ್ಲಿ ಮುಂದಿನ ಐದು ಪಂದ್ಯಗಳಲ್ಲಿ ಆರ್ಸಿಬಿ ತವರಿನಲ್ಲಿ ಆಡಲಿರುವುದು ಕೇವಲ 1 ಪಂದ್ಯವನ್ನು ಮಾತ್ರ. ಉಳಿದ 4 ಮ್ಯಾಚ್ಗಳನ್ನು ಎದುರಾಳಿ ತಂಡಗಳ ಹೋಮ್ಗ್ರೌಂಡ್ನಲ್ಲಿ ಆಡಬೇಕಿದೆ.
10 / 10
ಈಗಾಗಲೇ ನಾಲ್ಕು ಪಂದ್ಯಗಳನ್ನಾಡಿರುವ ಆರ್ಸಿಬಿಗೆ ಮುಂದಿನ 5 ಪಂದ್ಯಗಳು ಮುಖ್ಯವಾಗಿದ್ದು, ಈ ಪಂದ್ಯಗಳಲ್ಲಿ ಸೋಲನುಭವಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಳ್ಳಬಹುದು. ಹೀಗಾಗಿ ಎದುರಾಳಿಗಳ ಹೋಮ್ಗ್ರೌಂಡ್ನಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆರ್ಸಿಬಿ.