IPL 2024: RCB ತಂಡದ ಅತ್ಯಂತ ಹಿರಿಯ ಮತ್ತು ಕಿರಿಯ ಆಟಗಾರ ಯಾರು ಗೊತ್ತಾ?
TV9 Web | Updated By: ಝಾಹಿರ್ ಯೂಸುಫ್
Updated on:
Mar 14, 2024 | 10:23 AM
IPL 2024: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಮಾರ್ಚ್ 22 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ IPL 2024 ಕ್ಕೆ ಚಾಲನೆ ಸಿಗಲಿದೆ.
1 / 8
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ರಂಗು ರಂಗಿನ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ RCB ಮತ್ತು CSK ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಹಿರಿಯ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.
2 / 8
ಅಂದರೆ 42 ವರ್ಷದ ಮಹೇಂದ್ರ ಸಿಂಗ್ ಧೋನಿ 17ನೇ ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಅದರಂತೆ ಸಿಎಸ್ಕೆ ಪರ ಧೋನಿ ಹಿರಿಯ ಆಟಗಾರನಾದರೆ, ಆರ್ಸಿಬಿ ಪರ ಕಣಕ್ಕಿಳಿಯಲಿರುವ ಹಿರಿಯ ಆಟಗಾರ ಯಾರು? ತಂಡದಲ್ಲಿರುವ ಅತ್ಯಂತ ಕಿರಿಯ ಆಟಗಾರ ಯಾರೆಂಬ ಕುತೂಹಲ ಮೂಡುವುದು ಸಹಜ. ಈ ಕುತೂಹಲಕಾರಿ ಪ್ರಶ್ನೆಗೆ ಇಲ್ಲಿದೆ ಉತ್ತರ.
3 / 8
ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅತ್ಯಂತ ಹಿರಿಯ ಆಟಗಾರ ಫಾಫ್ ಡುಪ್ಲೆಸಿಸ್. ಆರ್ಸಿಬಿ ತಂಡದ ನಾಯಕನ ಪ್ರಸ್ತುತ ವಯಸ್ಸು 39 ವರ್ಷ, 252 ದಿನಗಳು. ಅದರಂತೆ ಈ ಬಾರಿ ಆರ್ಸಿಬಿ ಪರ ಕಣಕ್ಕಿಳಿಯಲಿರುವ ಅತ್ಯಂತ ಹಿರಿಯ ಆಟಗಾರನಾಗಿ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ.
4 / 8
ದಿನೇಶ್ ಕಾರ್ತಿಕ್: ಆರ್ಸಿಬಿ ತಂಡದಲ್ಲಿರುವ 2ನೇ ಅತ್ಯಂತ ಹಿರಿಯ ಆಟಗಾರ ದಿನೇಶ್ ಕಾರ್ತಿಕ್. ಡಿಕೆ ಅವರ ಪ್ರಸ್ತುತ ವಯಸ್ಸು 38 ವರ್ಷ, 294 ದಿನಗಳು. ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.
5 / 8
ಸೌರವ್ ಚೌಹಾಣ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಅತ್ಯಂತ ಕಿರಿಯ ಆಟಗಾರನೆಂದರೆ ಸೌರವ್ ಚೌಹಾಣ್. ಗುಜರಾತ್ ಮೂಲದ ಸೌರವ್ ಅವರ ಪ್ರಸ್ತುತ ವಯಸ್ಸು 23 ವರ್ಷ, 299 ದಿನಗಳು.
6 / 8
ಮಹಿಪಾಲ್ ಲೋಮ್ರರ್: ಆರ್ಸಿಬಿ ತಂಡದಲ್ಲಿರುವ 2ನೇ ಕಿರಿಯ ಆಟಗಾರ ಮಹಿಪಾಲ್ ಲೋಮ್ರರ್. ಎಡಗೈ ಆಲ್ರೌಂಡರ್ ಆಗಿರುವ ಮಹಿಪಾಲ್ ಅವರ ಪ್ರಸ್ತುತ ವಯಸ್ಸು 24 ವರ್ಷ, 126 ದಿನಗಳು.
7 / 8
ಈ ನಾಲ್ವರು ಆರ್ಸಿಬಿ ತಂಡದಲ್ಲಿ ಅತ್ಯಂತ ಹಿರಿಯ ಮತ್ತು ಕಿರಿಯ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅದರಂತೆ ಈ ಬಾರಿ ಆರ್ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಲಿರುವ ಹಿರಿಯ ಆಟಗಾರ ಹಾಗೂ ಕಿರಿಯ ಆಟಗಾರ ಯಾರೆಂಬುದನ್ನು ಕಾದು ನೋಡೋಣ.
8 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.