IPL 2024: ಹೊಸ ಮೈಲುಗಲ್ಲು ದಾಟಿದ ರಿಷಭ್ ಪಂತ್

| Updated By: ಝಾಹಿರ್ ಯೂಸುಫ್

Updated on: Apr 25, 2024 | 6:53 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) 40ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ವಿಶೇಷ ದಾಖಲೆಯನ್ನೂ ಸಹ ಬರೆದಿದ್ದಾರೆ.

1 / 6
ಐಪಿಎಲ್​ನ (IPL 2024) 40ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ರಿಷಭ್ ಪಂತ್ (Rishabh Pant) ವಿಶೇಷ ಮೈಲುಗಲ್ಲು ದಾಟಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು, ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

2 / 6
ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆಕ್ರಮಣಕಾರಿ ಆಟದೊಂದಿಗೆ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದ ಪಂತ್ ಕ್ರೀಸ್​ನಲ್ಲಿ ರುದ್ರತಾಂಡವ ತೋರಿಸಿದರು.

3 / 6
ಈ ಪ್ರಚಂಡ ಬ್ಯಾಟಿಂಗ್​ನೊಂದಿಗೆ ರಿಷಭ್ ಪಂತ್ ಕೇವಲ 43 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 88 ರನ್ ಬಾರಿಸಿದರು. ಈ ಅರ್ಧಶತಕದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪರ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇದಕ್ಕೂ ಮುನ್ನ ಈ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ಆಟಗಾರ ಶಿಖರ್ ಧವನ್ ಹೆಸರಿನಲ್ಲಿತ್ತು. ಡೆಲ್ಲಿ ಪರ 63 ಪಂದ್ಯಗಳನ್ನಾಡಿದ್ದ ಧವನ್ ಒಟ್ಟು 18 ಅರ್ಧಶತಕ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದ 106ನೇ ಇನಿಂಗ್ಸ್​ ಮೂಲಕ ರಿಷಭ್ ಪಂತ್ 19ನೇ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಡೆಲ್ಲಿ ಪರ ಅತೀ ಹೆಚ್ಚು ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರ ಅತ್ಯಧಿಕ ಅರ್ಧಶತಕ ಬಾರಿಸಿದ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿದೆ. ಡಿಸಿ ಪರ ಆಡಿದ 89 ಇನಿಂಗ್ಸ್​ಗಳಲ್ಲಿ ವಾರ್ನರ್ 24 ಹಾಫ್ ಸೆಂಚುರಿಗಳನ್ನು ಸಿಡಿಸಿ ಈ ದಾಖಲೆ ಬರೆದಿಟ್ಟಿದ್ದಾರೆ. ಇದೀಗ 19 ಅರ್ಧಶತಕಗಳೊಂದಿಗೆ ರಿಷಭ್ ಪಂತ್ ಈ ಪಟ್ಟಿಯಲ್ಲಿ  ದ್ವಿತೀಯ ಸ್ಥಾನಕ್ಕೇರಿರುವುದು ವಿಶೇಷ.

Published On - 6:52 am, Thu, 25 April 24