IPL 2024: ಪಂತ್ ಪವರ್: ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಾಣ
TV9 Web | Updated By: ಝಾಹಿರ್ ಯೂಸುಫ್
Updated on:
Apr 13, 2024 | 12:57 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಗೆಲುವು ದಾಖಲಿಸಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ನ ದಾಖಲೆ ರಿಷಭ್ ಪಂತ್ (Rishabh Pant) ಪಾಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 41 ರನ್ ಬಾರಿಸಿದ್ದರು.
2 / 5
ಈ 41 ರನ್ಗಳೊಂದಿಗೆ ರಿಷಭ್ ಪಂತ್ ಐಪಿಎಲ್ನಲ್ಲಿ 3 ಸಾವಿರ ರನ್ ಪೂರೈಸಿದರು. ಈ ಮೂಲಕ ಅತೀ ಕಡಿಮೆ ಎಸೆತಗಳನ್ನು ಎದುರಿಸಿ ಐಪಿಎಲ್ನಲ್ಲಿ 3000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಪಂತ್ ತಮ್ಮದಾಗಿಸಿಕೊಂಡರು.
3 / 5
ಇದಕ್ಕೂ ಮುನ್ನ ಈ ದಾಖಲೆ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಪಠಾಣ್ ಕೇವಲ 2082 ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು.
4 / 5
ಇದೀಗ ಈ ದಾಖಲೆಯನ್ನು ರಿಷಭ್ ಪಂತ್ ಅಳಿಸಿ ಹಾಕಿದ್ದಾರೆ. 2016 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಪಂತ್ 2028 ಎಸೆತಗಳನ್ನು ಎದುರಿಸಿ 3000 ರನ್ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
5 / 5
ಹಾಗೆಯೇ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 3 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಈ ಮೂಲಕ 16 ಸೀಸನ್ಗಳಿಂದ ಡೆಲ್ಲಿ ಪರ ಯಾರಿಂದಲೂ ಸಾಧ್ಯವಾಗದ ವಿಶೇಷ ಸಾಧನೆಯನ್ನು ರಿಷಭ್ ಪಂತ್ ಮಾಡಿ ತೋರಿಸಿದ್ದಾರೆ.