AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರಿಷಭ್​ ಪಂತ್​ಗೆ ​ನಿಷೇಧದ ಭೀತಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) 16ನೇ ಪಂದ್ಯದಲ್ಲಿ ಕೆಕೆಆರ್ ತಂಡ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 272 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 166 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕೆಕೆಆರ್ 106 ರನ್​ಗಳ ಅಮೋಘ ಗೆಲುವು ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2024 | 11:04 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 16ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ (Rishabh Pant) 24 ಲಕ್ಷ ರೂ. ದಂಡ ವಿಧಿಸಲಾಗಿದೆ. ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಿತ್ತು.

1 / 6
ಆದರೆ ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಪಾವತಿಸಬೇಕೆಂದು ತಿಳಿಸಲಾಗಿದೆ.

2 / 6
ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

3 / 6
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

4 / 6
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

5 / 6
ಇದೀಗ ರಿಷಭ್ ಪಂತ್ 2 ಬಾರಿ ಈ ತಪ್ಪನ್ನು ಮಾಡಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಶಿಕ್ಷೆಗೆ ಗುರಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ, ಇದೀಗ ಕೆಕೆಆರ್ ವಿರುದ್ಧ ಕೂಡ ಅದೇ ತಪ್ಪನ್ನು ಪುನರಾವರ್ತಿಸಿದ್ದಾರೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಈ ತಪ್ಪನ್ನು ಮಾಡಿದರೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ಪಂದ್ಯಗಳಲ್ಲಿ ರಿಷಭ್ ಪಂತ್ ಸ್ಲೋ ಓವರ್​ ರೇಟ್​ ಬಗ್ಗೆ ಎಚ್ಚರಿಕೆವಹಿಸಿಕೊಳ್ಳುವುದು ಅನಿವಾರ್ಯ.

6 / 6
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ