
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಿಷಭ್ ಪಂತ್ (Rishabh Pant) ಕಣಕ್ಕಿಳಿಯುವುದು ಖಚಿತವಾಗಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್ನೆಸ್ ಟೆಸ್ಟ್ನಲ್ಲಿ ರಿಷಭ್ ಪಾಸ್ ಆಗಿದ್ದು, ಈ ಮೂಲಕ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಅದರಂತೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಣಕ್ಕಿಳಿಯಲಿದೆ.

ಇದಕ್ಕೂ ಮುನ್ನ ರಿಷಭ್ ಪಂತ್ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾದರೆ, ಅವರು ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ನಲ್ಲಿ ತಮ್ಮ ಸಾಮರ್ಥ್ಯವನ್ನು ಪಂತ್ ತೆರೆದಿಟ್ಟಿದ್ದು, ಈ ಮೂಲಕ ಐಪಿಎಲ್ ಆಡಲು NCA ಕಡೆಯಿಂದ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

ಅತ್ತ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಈ ಬಾರಿಯ ಐಪಿಎಲ್ ರಿಷಭ್ ಪಂತ್ ಪಾಲಿಗೆ ನಿರ್ಣಾಯಕ. ಏಕೆಂದರೆ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಂತ್ ಐಪಿಎಲ್ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಹೀಗಾಗಿ ಈ ಬಾರಿಯ ಐಪಿಎಲ್ ರಿಷಭ್ ಅವರ ಟೀಮ್ ಇಂಡಿಯಾ ಕಂಬ್ಯಾಕ್ ಅನ್ನು ಕೂಡ ನಿರ್ಧರಿಸಲಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಅವರ ಮರಳುವಿಕೆಯಿಂದ ನಾಯಕತ್ವ ಕೂಡ ಬದಲಾಗಲಿದೆ. ಅಂದರೆ ಕಳೆದ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಇದೀಗ ಪಂತ್ ಕಂಬ್ಯಾಕ್ನಿಂದಾಗಿ ವಾರ್ನರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ರಿಷಭ್ ಪಂತ್ ಸಾರಥ್ಯದಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್. ಹ್ಯಾರಿ ಬ್ರೂಕ್, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜ್ಯೆ ರಿಚರ್ಡ್‌ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ.