AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್​ಗೆ ಅಗ್ನಿಪರೀಕ್ಷೆ: IPL​ ಆಡ್ತಾರಾ, ಆಡಲ್ವಾ?

Rishabh Pant: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ 98 ಪಂದ್ಯಗಳನ್ನಾಡಿರುವ ರಿಷಭ್ ಪಂತ್ 1 ಶತಕ ಮತ್ತು 15 ಅರ್ಧಶತಕಗಳೊಂದಿಗೆ ಒಟ್ಟು 2838 ರನ್ ಕಲೆಹಾಕಿದ್ದಾರೆ. ಕಳೆದ ಒಂದು ವರ್ಷದಿಂದ ಮೈದಾನದಿಂದ ಹೊರಗುಳಿದಿರುವ ಪಂತ್ ಇದೀಗ ಐಪಿಎಲ್ ಮೂಲಕವೇ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

TV9 Web
| Edited By: |

Updated on: Mar 02, 2024 | 1:08 PM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ (Rishabh Pant) ಕಳೆದ ಒಂದು ವರ್ಷದಿಂದ ಕ್ರಿಕೆಟ್ ಅಂಗಳದಿಂದ ದೂರ ಉಳಿದಿದ್ದಾರೆ. 2022ರ‌ ಡಿಸೆಂಬರ್ ‌30 ರಂದು ಕಾರು ಅಪಘಾತಕ್ಕೊಳಗಾಗಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ಬಳಿಕ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

1 / 6
ಇದಾಗ್ಯೂ ರಿಷಭ್ ಪಂತ್ ಐಪಿಎಲ್​ನಲ್ಲಿ ಪಾಲ್ಗೊಳ್ಳಬೇಕಿದ್ದರೆ ಫಿಟ್​ನೆಸ್ ಟೆಸ್ಟ್ ಪಾಸಾಗಲೇಬೇಕು. ಅಂದರೆ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪಂತ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದರೆ ಮಾತ್ರ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಅವಕಾಶ ದೊರೆಯಲಿದೆ.

2 / 6
ಮಾರ್ಚ್ 5 ರಂದು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ರಿಷಭ್ ಪಂತ್ ಅವರ ಫಿಟ್​ನೆಸ್ ಟೆಸ್ಟ್ ನಡೆಯಲಿದ್ದು, ಈ ವೇಳೆ ಅವರ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಸಾಮರ್ಥ್ಯವನ್ನು ಟೆಸ್ಟ್ ಮಾಡಲಾಗುತ್ತದೆ. ಈಗಾಗಲೇ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿರುವ ಪಂತ್ ವಿಕೆಟ್ ಕೀಪಿಂಗ್ ಕೂಡ ಮಾಡಲು ಸಮರ್ಥರಾ ಎಂಬುದು ಮಂಗಳವಾರ ನಿರ್ಧಾರವಾಗಲಿದೆ.

3 / 6
ಒಂದು ವೇಳೆ ಅವರು ವಿಕೆಟ್ ಕೀಪಿಂಗ್ ಮಾಡಲು ಅಸಮರ್ಥರು ಎಂಬುದು ಕಂಡು ಬಂದರೆ ಐಪಿಎಲ್​ನಲ್ಲಿ ಕೇವಲ ಬ್ಯಾಟರ್ ಆಗಿ ಮಾತ್ರ ಕಣಕ್ಕಿಳಿಯಬೇಕಾಗುತ್ತದೆ. ಹೀಗಾಗಿಯೇ ರಿಷಭ್ ಪಂತ್ ಅವರ ಫಿಟ್​ನೆಸ್ ಟೆಸ್ಟ್ ರಿಸಲ್ಟ್​ ಕುತೂಹಲಕ್ಕೆ ಕಾರಣವಾಗಿದೆ.

4 / 6
ಇತ್ತ ಡೆಲ್ಲಿ ಫ್ರಾಂಚೈಸಿಯು ಈ ಬಾರಿ ರಿಷಭ್ ಪಂತ್ ಅವರ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ ಎಂದು ಘೋಷಿಸಿದೆ. ಇದಾಗ್ಯೂ ಅವರು ವಿಕೆಟ್ ಕೀಪಿಂಗ್ ಮಾಡಲಿದ್ದಾರಾ ಎಂಬುದನ್ನು ಖಚಿತಪಡಿಸಿಲ್ಲ. ಹೀಗಾಗಿ ಮಾರ್ಚ್ 5 ರಂದು ನಡೆಯುವ ಫಿಟ್​ನೆಸ್ ಅಗ್ನಿಪರೀಕ್ಷೆಯಲ್ಲಿ ಪಂತ್ ತೇರ್ಗಡೆಯಾದರೆ ಮಾತ್ರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯಲು ಅವಕಾಶ ಇರಲಿದೆ. ಇಲ್ಲದಿದ್ದರೆ ಕೇವಲ ಬ್ಯಾಟ್ಸ್​ಮನ್ ಆಗಿ ಆಡುವ ಸಾಧ್ಯತೆಯಿದೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್ (ನಾಯಕ), ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜ್ಯೆ ರಿಚರ್ಡ್‌ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ.

6 / 6
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ