AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟಿ20 ಕ್ರಿಕೆಟ್​ನಲ್ಲಿ ಹಿಸ್ಟರಿ ಬರೆದ ಹಿಟ್​ಮ್ಯಾನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 234 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 205 ರನ್​ಗಳಿಸಿ 29 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Edited By: |

Updated on: Apr 08, 2024 | 8:33 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 20ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹಿಟ್​ಮ್ಯಾನ್ 27 ಎಸೆತಗಳಲ್ಲಿ 6 ಫೋರ್ ಹಾಗೂ 3 ಸಿಕ್ಸ್​ನೊಂದಿಗೆ 49 ರನ್ ಬಾರಿಸಿದರು.

1 / 6
ಈ 49 ರನ್​ಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1000 ರನ್ ಕಲೆಹಾಕಿದ ವಿಶೇಷ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡರು.

2 / 6
ಅಲ್ಲದೆ ಈ ಪಂದ್ಯದಲ್ಲಿ ಬಾರಿಸಿದ 3 ಸಿಕ್ಸ್​ನೊಂದಿಗೆ ಐಪಿಎಲ್​ ತಂಡವೊಂದರ ವಿರುದ್ಧ ಅತ್ಯಧಿಕ ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಯಿತು. ಹಿಟ್​ಮ್ಯಾನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇದುವರೆಗೆ 49 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

3 / 6
ಈ ಪಂದ್ಯದಲ್ಲಿ ಹಿಟ್​ಮ್ಯಾನ್ ಒಟ್ಟು 6 ಫೋರ್​ ಮತ್ತು 3 ಸಿಕ್ಸ್​ಗಳನ್ನು ಬಾರಿಸಿದ್ದರು. ಈ 9 ಬೌಂಡರಿಗಳೊಂದಿಗೆ ಟಿ20 ಸ್ವರೂಪದಲ್ಲಿ 1500 ಬೌಂಡರಿಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡರು.

4 / 6
ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್​ಗಳನ್ನು ಹಿಡಿದ 4ನೇ ಫೀಲ್ಡರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ 110 ಕ್ಯಾಚ್​​ಗಳನ್ನು ಹಿಡಿದಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

5 / 6
ಹಾಗೆಯೇ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದರೊಂದಿಗೆ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದರು. ಅಂದರೆ ಟಿ20 ಕ್ರಿಕೆಟ್​ನಲ್ಲಿ 250 ಪಂದ್ಯಗಳ ಗೆಲುವಿನಲ್ಲಿ ಭಾಗಿಯಾದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಹಿಟ್​ಮ್ಯಾನ್ ಪಾತ್ರರಾದರು.

6 / 6
TV9 Web
TV9 Web

TV9 Kannada

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!