Rohit Sharma: ಟಿ20 ಕ್ರಿಕೆಟ್ನಲ್ಲಿ ಹಿಸ್ಟರಿ ಬರೆದ ಹಿಟ್ಮ್ಯಾನ್
TV9 Web | Updated By: ಝಾಹಿರ್ ಯೂಸುಫ್
Updated on:
Apr 08, 2024 | 8:33 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 234 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 205 ರನ್ಗಳಿಸಿ 29 ರನ್ಗಳಿಂದ ಸೋಲೊಪ್ಪಿಕೊಂಡಿತು.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 20ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹಿಟ್ಮ್ಯಾನ್ 27 ಎಸೆತಗಳಲ್ಲಿ 6 ಫೋರ್ ಹಾಗೂ 3 ಸಿಕ್ಸ್ನೊಂದಿಗೆ 49 ರನ್ ಬಾರಿಸಿದರು.
2 / 6
ಈ 49 ರನ್ಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1000 ರನ್ ಕಲೆಹಾಕಿದ ವಿಶೇಷ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡರು.
3 / 6
ಅಲ್ಲದೆ ಈ ಪಂದ್ಯದಲ್ಲಿ ಬಾರಿಸಿದ 3 ಸಿಕ್ಸ್ನೊಂದಿಗೆ ಐಪಿಎಲ್ ತಂಡವೊಂದರ ವಿರುದ್ಧ ಅತ್ಯಧಿಕ ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಯಿತು. ಹಿಟ್ಮ್ಯಾನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇದುವರೆಗೆ 49 ಸಿಕ್ಸ್ಗಳನ್ನು ಸಿಡಿಸಿದ್ದಾರೆ.
4 / 6
ಈ ಪಂದ್ಯದಲ್ಲಿ ಹಿಟ್ಮ್ಯಾನ್ ಒಟ್ಟು 6 ಫೋರ್ ಮತ್ತು 3 ಸಿಕ್ಸ್ಗಳನ್ನು ಬಾರಿಸಿದ್ದರು. ಈ 9 ಬೌಂಡರಿಗಳೊಂದಿಗೆ ಟಿ20 ಸ್ವರೂಪದಲ್ಲಿ 1500 ಬೌಂಡರಿಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡರು.
5 / 6
ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ನೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್ಗಳನ್ನು ಹಿಡಿದ 4ನೇ ಫೀಲ್ಡರ್ ಎನಿಸಿಕೊಂಡರು. ಈ ಪಟ್ಟಿಯಲ್ಲಿ 110 ಕ್ಯಾಚ್ಗಳನ್ನು ಹಿಡಿದಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
6 / 6
ಹಾಗೆಯೇ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದರೊಂದಿಗೆ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದರು. ಅಂದರೆ ಟಿ20 ಕ್ರಿಕೆಟ್ನಲ್ಲಿ 250 ಪಂದ್ಯಗಳ ಗೆಲುವಿನಲ್ಲಿ ಭಾಗಿಯಾದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಹಿಟ್ಮ್ಯಾನ್ ಪಾತ್ರರಾದರು.