- Kannada News Photo gallery Cricket photos IPL 2024: Ruturaj Gaikwad becomes fastest to reach 2,000 IPL runs
IPL 2024: ರಾಹುಲ್ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್
IPL 2024: ಐಪಿಎಲ್ 2024ರ 29ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಕೆಎಲ್ ರಾಹುಲ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಇದೀಗ ರುತುರಾಜ್ ಪಾಲಾಗಿದೆ.
Updated on: Apr 15, 2024 | 7:58 AM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 29ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಐಪಿಎಲ್ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರುತುರಾಜ್, 40 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 69 ರನ್ ಬಾರಿಸಿದ್ದರು.

ಈ 69 ರನ್ಗಳೊಂದಿಗೆ ರುತುರಾಜ್ ಗಾಯಕ್ವಾಡ್ ಐಪಿಎಲ್ನಲ್ಲಿ ಅತೀ ವೇಗವಾಗಿ 2000 ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಬರೆದರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು.

ಕೆಎಲ್ ರಾಹುಲ್ 60 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಈ ಮೂಲಕ ಐಪಿಎಲ್ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 2000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಕೇವಲ 57 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಳೆದ ಕೆಲ ವರ್ಷಗಳಿಂದ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ದಾಖಲೆ ಇರುವುದು ಕ್ರಿಸ್ ಗೇಲ್ ಹೆಸರಿನಲ್ಲಿ. ಗೇಲ್ ಕೇವಲ 48 ಇನಿಂಗ್ಸ್ಗಳ ಮೂಲಕ 2000 ರನ್ ಕಲೆಹಾಕಿದ್ದರು. ಇದೀಗ 57 ಇನಿಂಗ್ಸ್ಗಳಲ್ಲಿ 2 ಸಾವಿರ ರನ್ ಪೂರೈಸುವ ಮೂಲಕ ಐಪಿಎಲ್ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರುತುರಾಜ್ ಗಾಯಕ್ವಾಡ್ ತಮ್ಮದಾಗಿಸಿಕೊಂಡಿದ್ದಾರೆ.



















