ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 29ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಐಪಿಎಲ್ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರುತುರಾಜ್, 40 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 69 ರನ್ ಬಾರಿಸಿದ್ದರು.
ಈ 69 ರನ್ಗಳೊಂದಿಗೆ ರುತುರಾಜ್ ಗಾಯಕ್ವಾಡ್ ಐಪಿಎಲ್ನಲ್ಲಿ ಅತೀ ವೇಗವಾಗಿ 2000 ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಬರೆದರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು.
ಕೆಎಲ್ ರಾಹುಲ್ 60 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಈ ಮೂಲಕ ಐಪಿಎಲ್ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 2000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.
ಇದೀಗ ಕೇವಲ 57 ಇನಿಂಗ್ಸ್ಗಳ ಮೂಲಕ 2 ಸಾವಿರ ರನ್ ಪೂರೈಸಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಳೆದ ಕೆಲ ವರ್ಷಗಳಿಂದ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ದಾಖಲೆ ಇರುವುದು ಕ್ರಿಸ್ ಗೇಲ್ ಹೆಸರಿನಲ್ಲಿ. ಗೇಲ್ ಕೇವಲ 48 ಇನಿಂಗ್ಸ್ಗಳ ಮೂಲಕ 2000 ರನ್ ಕಲೆಹಾಕಿದ್ದರು. ಇದೀಗ 57 ಇನಿಂಗ್ಸ್ಗಳಲ್ಲಿ 2 ಸಾವಿರ ರನ್ ಪೂರೈಸುವ ಮೂಲಕ ಐಪಿಎಲ್ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರುತುರಾಜ್ ಗಾಯಕ್ವಾಡ್ ತಮ್ಮದಾಗಿಸಿಕೊಂಡಿದ್ದಾರೆ.