- Kannada News Photo gallery Cricket photos IPL 2024: Ruturaj Gaikwad First CSK captain smash a century in IPL
IPL 2024: CSK ಪರ ಹೊಸ ಇತಿಹಾಸ ಬರೆದ ರುತುರಾಜ್ ಗಾಯಕ್ವಾಡ್
IPL 2024: ಐಪಿಎಲ್ 2024 ರಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್ನೊಂದಿಗೆ ಸಿಎಸ್ಕೆ ನಾಯಕ ವಿಶೇಷ ದಾಖಲೆಯನ್ನು ಕೂಡ ಬರೆದರು.
Updated on: Apr 24, 2024 | 6:53 AM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 39ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಆ ಬಳಿಕ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅರ್ಧಶತಕದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬೌಲರ್ಗಳ ಬೆಂಡೆತ್ತಿದ ಸಿಎಸ್ಕೆ ನಾಯಕ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್ಗಳನ್ನು ಬಾರಿಸಿದರು.

ಈ ಬಿರುಸಿನ ಬ್ಯಾಟಿಂಗ್ನೊಂದಿಗೆ ರುತುರಾಜ್ ಗಾಯಕ್ವಾಡ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸಿಎಸ್ಕೆ ಪರ ಶತಕ ಸಿಡಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರುತುರಾಜ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 6 ಬ್ಯಾಟರ್ಗಳು ಶತಕ ಸಿಡಿಸಿದ್ದಾರೆ. ಆದರೆ ನಾಯಕನಾಗಿ ಕಣಕ್ಕಿಳಿದ ಯಾವುದೇ ಆಟಗಾರ ಸಿಎಸ್ಕೆ ಪರ ಸೆಂಚುರಿ ಸಿಡಿಸಿರಲಿಲ್ಲ. ಅಲ್ಲದೆ ಧೋನಿ 84 ರನ್ ಗಳಿಸಿದ್ದು ಸಿಎಸ್ಕೆ ನಾಯಕನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ರುತುರಾಜ್ ಗಾಯಕ್ವಾಡ್ ನೀಗಿಸಿರುವುದು ವಿಶೇಷ.

ಇನ್ನು ನಾಯಕನ ಈ ಭರ್ಜರಿ ಸೆಂಚುರಿಯೊಂದಿಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಅಜೇಯ 124 ರನ್ ಬಾರಿಸಿದರು. ಅಲ್ಲದೆ 19.3 ಓವರ್ಗಳಲ್ಲಿ ಎಲ್ಎಸ್ಜಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.
