IPL 2024: CSK ಪರ ಹೊಸ ಇತಿಹಾಸ ಬರೆದ ರುತುರಾಜ್ ಗಾಯಕ್ವಾಡ್

| Updated By: ಝಾಹಿರ್ ಯೂಸುಫ್

Updated on: Apr 24, 2024 | 6:53 AM

IPL 2024: ಐಪಿಎಲ್​ 2024 ರಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ ರುತುರಾಜ್ 3 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಸಿಎಸ್​ಕೆ ನಾಯಕ ವಿಶೇಷ ದಾಖಲೆಯನ್ನು ಕೂಡ ಬರೆದರು.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 39ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು.

2 / 5
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅರ್ಧಶತಕದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಬೆಂಡೆತ್ತಿದ ಸಿಎಸ್​ಕೆ ನಾಯಕ ಮೈದಾನದ ಮೂಲೆ ಮೂಲೆಗೆ ಸಿಕ್ಸ್-ಫೋರ್​ಗಳನ್ನು ಬಾರಿಸಿದರು.

3 / 5
ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ರುತುರಾಜ್ ಗಾಯಕ್ವಾಡ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ಪರ ಶತಕ ಸಿಡಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ರುತುರಾಜ್ ತಮ್ಮದಾಗಿಸಿಕೊಂಡರು.

4 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪರ ಒಟ್ಟು 6 ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಆದರೆ ನಾಯಕನಾಗಿ ಕಣಕ್ಕಿಳಿದ ಯಾವುದೇ ಆಟಗಾರ ಸಿಎಸ್​ಕೆ ಪರ ಸೆಂಚುರಿ ಸಿಡಿಸಿರಲಿಲ್ಲ. ಅಲ್ಲದೆ ಧೋನಿ 84 ರನ್ ಗಳಿಸಿದ್ದು ಸಿಎಸ್​ಕೆ ನಾಯಕ​ನ ಗರಿಷ್ಠ ಸ್ಕೋರ್ ಆಗಿತ್ತು. ಇದೀಗ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ರುತುರಾಜ್ ಗಾಯಕ್ವಾಡ್ ನೀಗಿಸಿರುವುದು ವಿಶೇಷ.

5 / 5
ಇನ್ನು ನಾಯಕನ ಈ ಭರ್ಜರಿ ಸೆಂಚುರಿಯೊಂದಿಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಅಜೇಯ 124 ರನ್​ ಬಾರಿಸಿದರು. ಅಲ್ಲದೆ 19.3 ಓವರ್​ಗಳಲ್ಲಿ ಎಲ್​ಎಸ್​ಜಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.