ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ (IPL 2024) 56ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 222 ರನ್ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿದ್ದರು.