IPL 2024: ಸ್ಯಾಮ್ಸನ್ ಸಿಕ್ಸರ್​ಗೆ ಮುರಿದು ಬಿದ್ದ ಧೋನಿ ದಾಖಲೆ

| Updated By: ಝಾಹಿರ್ ಯೂಸುಫ್

Updated on: May 08, 2024 | 1:31 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ ) ಇತಿಹಾಸದಲ್ಲಿ ಕೇವಲ 10 ಬ್ಯಾಟರ್​ಗಳು ಮಾತ್ರ 200+ ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 9ನೇ ಸ್ಥಾನಕ್ಕೇರಿದ್ದಾರೆ. ಇದರೊಂದಿಗೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನೂ ಕೂಡ ಮುರಿದಿದ್ದಾರೆ.

1 / 5
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 56ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 222 ರನ್​ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿದ್ದರು.

2 / 5
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್ಸನ್ 46 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 86 ರನ್ ಬಾರಿಸಿದರು. ಈ ವೇಳೆ ಸಿಡಿಸಿದ 6 ಸಿಕ್ಸರ್​ಗಳೊಂದಿಗೆ ಸ್ಯಾಮ್ಸನ್​ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು  ಮುರಿದಿದ್ದಾರೆ.

3 / 5
ಐಪಿಎಲ್ ಇತಿಹಾಸದಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 200 ಸಿಕ್ಸ್​ಗಳನ್ನು ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಧೋನಿ ಕೇವಲ 165 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಸಂಜು ಸ್ಯಾಮ್ಸನ್ ಅಳಿಸಿ ಹಾಕಿದ್ದಾರೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 6 ಸಿಕ್ಸ್​ ಬಾರಿಸುವುದರೊಂದಿಗೆ ಸಂಜು ಸ್ಯಾಮ್ಸನ್ ಕೇವಲ 159 ಇನಿಂಗ್ಸ್​ಗಳ ಮೂಲಕ 200 ಸಿಕ್ಸ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಇನ್ನೂರು ಸಿಕ್ಸ್​ಗಳನ್ನು ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಇನ್ನು ಸಂಜು ಸ್ಯಾಮ್ಸನ್ ಅವರ ಬಿರುಸಿನ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಲಿಲ್ಲ. 222 ರನ್​ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್​ಗಳಲ್ಲಿ 201 ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.