AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಂಜು ಸ್ಯಾಮ್ಸನ್​ಗೆ 30 ಲಕ್ಷ ರೂ. ದಂಡ..!

IPL 2024: ಐಪಿಎಲ್​ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಫೀಲ್ಡ್ ಅಂಪೈರ್​ಗಳ ವಾಗ್ವಾದ ನಡೆಸಿದ್ದರು. ಈ ಕಾರಣಕ್ಕಾಗಿ ಇದೀಗ ಸ್ಯಾಮ್ಸನ್ ಮೇಲೆ ಬಿಸಿಸಿಐ ಕ್ರಮ ಕೈಗೊಂಡಿದೆ.

TV9 Web
| Edited By: |

Updated on: May 08, 2024 | 10:51 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ (Sanju Samson) ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಅಂಪೈರ್ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.

1 / 5
ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಈ ವೇಳೆ ಕ್ಯಾಚ್ ಹಿಡಿದ ಶಾಯ್ ಹೋಪ್ ಅವರ ಕಾಲು ಬೌಂಡರಿ ಲೈನ್​ಗೆ ತಗುಲಿದೆಯಾ ಎಂದು ಟಿವಿ ಅಂಪೈರ್ ಪರಿಶೀಲಿಸಿ ಔಟ್ ತೀರ್ಪು ನೀಡಿದ್ದರು.

2 / 5
ಈ ತೀರ್ಪನ್ನು ಮರು ಪರಿಶೀಲಿಸುವಂತೆ ಸಂಜು ಸ್ಯಾಮ್ಸನ್ ಫೀಲ್ಡ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಅಲ್ಲದೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಇದೀಗ ಸಂಜು ಸ್ಯಾಮ್ಸನ್​ಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

3 / 5
ಅದರಂತೆ ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಅಲ್ಲದೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಿಗೆ ಮ್ಯಾಚ್ ರೆಫರಿ ಎಚ್ಚರಿಕೆ ನೀಡಿದ್ದಾರೆ.

4 / 5
ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ (86) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದಾಗ್ಯೂ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್​ಗಳಲ್ಲಿ 201 ರನ್​ಗಳಿಗೆ ನಿಯಂತ್ರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್​ಗಳ ಜಯ ಸಾಧಿಸಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ