IPL 2024: ಸಂಜು ಸ್ಯಾಮ್ಸನ್ಗೆ 30 ಲಕ್ಷ ರೂ. ದಂಡ..!
TV9 Web | Updated By: ಝಾಹಿರ್ ಯೂಸುಫ್
Updated on:
May 08, 2024 | 10:51 AM
IPL 2024: ಐಪಿಎಲ್‌ನ 56ನೇ ಪಂದ್ಯದಲ್ಲಿ ಟಿವಿ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪನ್ನು ಪ್ರಶ್ನಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಫೀಲ್ಡ್ ಅಂಪೈರ್ಗಳ ವಾಗ್ವಾದ ನಡೆಸಿದ್ದರು. ಈ ಕಾರಣಕ್ಕಾಗಿ ಇದೀಗ ಸ್ಯಾಮ್ಸನ್ ಮೇಲೆ ಬಿಸಿಸಿಐ ಕ್ರಮ ಕೈಗೊಂಡಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 56ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ (Sanju Samson) ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಔಟಾದ ಬಳಿಕ ಸ್ಯಾಮ್ಸನ್ ಅಂಪೈರ್ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.
2 / 5
ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್ನ 4ನೇ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ್ದರು. ಈ ವೇಳೆ ಕ್ಯಾಚ್ ಹಿಡಿದ ಶಾಯ್ ಹೋಪ್ ಅವರ ಕಾಲು ಬೌಂಡರಿ ಲೈನ್ಗೆ ತಗುಲಿದೆಯಾ ಎಂದು ಟಿವಿ ಅಂಪೈರ್ ಪರಿಶೀಲಿಸಿ ಔಟ್ ತೀರ್ಪು ನೀಡಿದ್ದರು.
3 / 5
ಈ ತೀರ್ಪನ್ನು ಮರು ಪರಿಶೀಲಿಸುವಂತೆ ಸಂಜು ಸ್ಯಾಮ್ಸನ್ ಫೀಲ್ಡ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಅಲ್ಲದೆ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಇದೀಗ ಸಂಜು ಸ್ಯಾಮ್ಸನ್ಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.
4 / 5
ಅದರಂತೆ ಐಪಿಎಲ್ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಅಲ್ಲದೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಿಗೆ ಮ್ಯಾಚ್ ರೆಫರಿ ಎಚ್ಚರಿಕೆ ನೀಡಿದ್ದಾರೆ.
5 / 5
ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ (86) ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದಾಗ್ಯೂ ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 20 ಓವರ್ಗಳಲ್ಲಿ 201 ರನ್ಗಳಿಗೆ ನಿಯಂತ್ರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ರನ್ಗಳ ಜಯ ಸಾಧಿಸಿದೆ.