IPL 2024: ಐಪಿಎಲ್ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 17 ರ ತನ್ನ ಮೊದಲ ಪಂಧ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಬ್ಬರಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸುವ ಮೂಲಕ ಸ್ಯಾಮ್ಸನ್ ಐಪಿಎಲ್ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
Updated on: Mar 25, 2024 | 8:52 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಶುಭಾರಂಭ ಮಾಡಿದೆ. ಈ ಗೆಲುವಿನ ರೂವಾರಿ ರಾಜಸ್ಥಾನ್ ತಂಡ ನಾಯಕ ಸಂಜು ಸ್ಯಾಮ್ಸನ್ (Sanju Samson).

ಜೋಸ್ ಬಟ್ಲರ್ (11) ಔಟಾದ ಬಳಿಕ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಆರ್ಆರ್ ತಂಡದ ನಾಯಕ ಲಕ್ನೋ ಬೌಲರ್ಗಳ ಬೆಂಡೆತ್ತಿದರು. ಈ ಮೂಲಕ 52 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 82 ರನ್ ಬಾರಿಸಿದರು.

ಈ ಅರ್ಧಶತಕದೊಂದಿಗೆ ಸಂಜು ಸ್ಯಾಮ್ಸನ್ ಐಪಿಎಲ್ ಇತಿಹಾಸದಲ್ಲೇ ಅಪರೂಪದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಸತತ ಐದು ಬಾರಿ 50+ ಸ್ಕೋರ್ಗಳಿಸಿದ ಏಕೈಕ ನಾಯಕನಾಗಿ ಸ್ಯಾಮ್ಸನ್ ಗುರುತಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2020 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ಪಂದ್ಯದಲ್ಲಿ ಸ್ಯಾಮ್ಸನ್ 74 ರನ್ ಬಾರಿಸಿದ್ದರು. ಹಾಗೆಯೇ 2021ರ ಮೊದಲ ಪಂದ್ಯದಲ್ಲಿ 119 ರನ್ ಸಿಡಿಸಿ ಅಬ್ಬರಿಸಿದ್ದರು. ಇನ್ನು 2022 ರ ಪ್ರಥಮ ಮ್ಯಾಚ್ನಲ್ಲಿ 55 ರನ್ ಸಿಡಿಸಿದ್ದರು. ಹಾಗೆಯೇ 2023 ರ ಮೊದಲ ಪಂದ್ಯದಲ್ಲಿ ಸ್ಯಾಮ್ಸನ್ ಬ್ಯಾಟ್ನಿಂದ 55 ರನ್ಗಳ ಅರ್ಧಶತಕ ಮೂಡಿಬಂದಿತ್ತು.

ಇದೀಗ ಐಪಿಎಲ್ 2024 ರ ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ಪಂದ್ಯದಲ್ಲಿ ಸ್ಯಾಮ್ಸನ್ ಅಜೇಯ 82 ರನ್ ಬಾರಿಸಿ ಮಿಂಚಿದ್ದಾರೆ. ಈ ಮೂಲಕ 5 ಸೀಸನ್ಗಳಲ್ಲಿ ಮೊದಲ ಪಂದ್ಯದಲ್ಲಿ 50+ ಸ್ಕೋರ್ಗಳಿಸಿದ ಐಪಿಎಲ್ನ ಏಕೈಕ ನಾಯಕ ಎಂಬ ದಾಖಲೆಯನ್ನು ಸಂಜು ಸ್ಯಾಮ್ಸನ್ ನಿರ್ಮಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ನೀಡಿದ 194 ರನ್ಗಳ ಗುರಿಯನ್ನು ಬೆನ್ನತ್ತಿದ ಕೆಎಲ್ ರಾಹುಲ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಂಜು ಸ್ಯಾಮ್ಸನ್ ಪಡೆ ಮೊದಲ ಪಂದ್ಯದಲ್ಲಿ 20 ರನ್ಗಳ ಭರ್ಜರಿ ಜಯ ಸಾಧಿಸಿದೆ.
























