AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿಯ ದಾಖಲೆ ಮುರಿದ ಶಿಖರ್ ಧವನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 199 ರನ್​ ಕಲೆಹಾಕಿತು. 200 ರನ್​ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 178 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 21 ರನ್​ಗಳ ಜಯ ಸಾಧಿಸಿದೆ.

TV9 Web
| Edited By: |

Updated on: Mar 31, 2024 | 1:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 11ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶಿಖರ್ ಧವನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ 50 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 70 ರನ್ ಬಾರಿಸಿದ್ದರು.

1 / 5
ಈ ಹಾಫ್ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ ವೇಳೆ ಅತ್ಯಧಿಕ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಶಿಖರ್ ಧವನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿತ್ತು.

2 / 5
ಐಪಿಎಲ್​ನಲ್ಲಿ 232 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 52 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಅರ್ಧಶತಕಗಳಲ್ಲಿ 21 ಹಾಫ್ ಸೆಂಚುರಿಗಳು ಚೇಸಿಂಗ್ ವೇಳೆ ಮೂಡಿಬಂದಿರುವುದು ವಿಶೇಷ. ಈ ಮೂಲಕ ಐಪಿಎಲ್ ರನ್​​ ಚೇಸಿಂಗ್​ ವೇಳೆ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಶಿಖರ್ ಧವನ್ ಯಶಸ್ವಿಯಾಗಿದ್ದಾರೆ. ಐಪಿಎಲ್​ನಲ್ಲಿ 219 ಪಂದ್ಯಗಳನ್ನಾಡಿರುವ ಧವನ್ ಒಟ್ಟು 51 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೇ ವೇಳೆ ಚೇಸಿಂಗ್​ನಲ್ಲಿ ಶಿಖರ್ ಬ್ಯಾಟ್​ನಿಂದ ಒಟ್ಟು 22 ಅರ್ಧಶತಕಗಳು ಮೂಡಿಬಂದಿವೆ. ಈ ಮೂಲಕ ಕೊಹ್ಲಿ ಹೆಸರಿನಲ್ಲಿದ್ದ ಚೇಸಿಂಗ್ ಹಾಫ್ ಸೆಂಚುರಿ ದಾಖಲೆಯನ್ನು ಶಿಖರ್ ಧವನ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇನ್ನು ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ ವೇಳೆ ಅತೀ ಹೆಚ್ಚು ಅರ್ಧಶತಕ ಬಾರಿಸಿದ ದಾಖಲೆ ಇರುವುದು ಡೇವಿಡ್ ವಾರ್ನರ್ ಹೆಸರಿನಲ್ಲಿ. ಐಪಿಎಲ್​ನಲ್ಲಿ 178 ಇನಿಂಗ್ಸ್ ಆಡಿರುವ ವಾರ್ನರ್ 61 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಅರ್ಧಶತಕಗಳಲ್ಲಿ 34 ಹಾಫ್ ಸೆಂಚುರಿಗಳು ಮೂಡಿಬಂದಿರುವುದು ಚೇಸಿಂಗ್ ವೇಳೆ ಎಂಬುದು ವಿಶೇಷ.

5 / 5
Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ

ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ