IPL 2024: ಕಿಂಗ್ ಕೊಹ್ಲಿಯ ದಾಖಲೆ ಮುರಿದ ಶಿಖರ್ ಧವನ್
TV9 Web | Updated By: ಝಾಹಿರ್ ಯೂಸುಫ್
Updated on:
Mar 31, 2024 | 1:58 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 199 ರನ್ ಕಲೆಹಾಕಿತು. 200 ರನ್ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 178 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 21 ರನ್ಗಳ ಜಯ ಸಾಧಿಸಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 11ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶಿಖರ್ ಧವನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ 50 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 70 ರನ್ ಬಾರಿಸಿದ್ದರು.
2 / 5
ಈ ಹಾಫ್ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ ವೇಳೆ ಅತ್ಯಧಿಕ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಶಿಖರ್ ಧವನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿತ್ತು.
3 / 5
ಐಪಿಎಲ್ನಲ್ಲಿ 232 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 52 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಅರ್ಧಶತಕಗಳಲ್ಲಿ 21 ಹಾಫ್ ಸೆಂಚುರಿಗಳು ಚೇಸಿಂಗ್ ವೇಳೆ ಮೂಡಿಬಂದಿರುವುದು ವಿಶೇಷ. ಈ ಮೂಲಕ ಐಪಿಎಲ್ ರನ್ ಚೇಸಿಂಗ್ ವೇಳೆ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.
4 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಶಿಖರ್ ಧವನ್ ಯಶಸ್ವಿಯಾಗಿದ್ದಾರೆ. ಐಪಿಎಲ್ನಲ್ಲಿ 219 ಪಂದ್ಯಗಳನ್ನಾಡಿರುವ ಧವನ್ ಒಟ್ಟು 51 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೇ ವೇಳೆ ಚೇಸಿಂಗ್ನಲ್ಲಿ ಶಿಖರ್ ಬ್ಯಾಟ್ನಿಂದ ಒಟ್ಟು 22 ಅರ್ಧಶತಕಗಳು ಮೂಡಿಬಂದಿವೆ. ಈ ಮೂಲಕ ಕೊಹ್ಲಿ ಹೆಸರಿನಲ್ಲಿದ್ದ ಚೇಸಿಂಗ್ ಹಾಫ್ ಸೆಂಚುರಿ ದಾಖಲೆಯನ್ನು ಶಿಖರ್ ಧವನ್ ತಮ್ಮದಾಗಿಸಿಕೊಂಡಿದ್ದಾರೆ.
5 / 5
ಇನ್ನು ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ ವೇಳೆ ಅತೀ ಹೆಚ್ಚು ಅರ್ಧಶತಕ ಬಾರಿಸಿದ ದಾಖಲೆ ಇರುವುದು ಡೇವಿಡ್ ವಾರ್ನರ್ ಹೆಸರಿನಲ್ಲಿ. ಐಪಿಎಲ್ನಲ್ಲಿ 178 ಇನಿಂಗ್ಸ್ ಆಡಿರುವ ವಾರ್ನರ್ 61 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಅರ್ಧಶತಕಗಳಲ್ಲಿ 34 ಹಾಫ್ ಸೆಂಚುರಿಗಳು ಮೂಡಿಬಂದಿರುವುದು ಚೇಸಿಂಗ್ ವೇಳೆ ಎಂಬುದು ವಿಶೇಷ.