- Kannada News Photo gallery Cricket photos IPL 2024: Shikhar Dhawan has become the first player to hit 900 boundaries in IPL
IPL 2024: ಐಪಿಎಲ್ನಲ್ಲಿ ಹೊಸ ಮೈಲುಗಲ್ಲು ದಾಟಿದ ಶಿಖರ್ ಧವನ್
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲೇ 900+ ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಶಿಖರ್ ಧವನ್ ನಿರ್ಮಿಸಿದ್ದಾರೆ. ಅದು ಕೂಡ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಈ ಮೂಲಕ IPL 2024 ರ ಆರಂಭದಲ್ಲೇ ಧವನ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
Updated on: Mar 24, 2024 | 6:52 AM

IPL 2024: ಚಂಡೀಗಢ್ನ ಮಹಾರಾಜ ಯದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ (Shikhar Dhawan) ಹೊಸ ಮೈಲ್ಲುಗಲ್ಲು ದಾಟಿದ್ದಾರೆ. ಅದು ಕೂಡ ಬೌಂಡರಿಗಳ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಎಂಬ ಹಿರಿಮೆಗೆ ಧವನ್ ಪಾತ್ರರಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಶಿಖರ್ ಧವನ್ 16 ಎಸೆತಗಳಲ್ಲಿ 4 ಫೋರ್ಗಳೊಂದಿಗೆ 22 ರನ್ ಬಾರಿಸಿದ್ದಾರೆ. ಈ ನಾಲ್ಕು ಫೋರ್ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 900 ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಶಿಖರ್ ಧವನ್ ತಮ್ಮದಾಗಿಸಿಕೊಂಡಿದ್ದಾರೆ.

ಗಬ್ಬರ್ ಖ್ಯಾತಿಯ ಶಿಖರ್ ಧವನ್ 217 ಐಪಿಎಲ್ ಇನಿಂಗ್ಸ್ಗಳಲ್ಲಿ 754 ಫೋರ್ಗಳು ಮತ್ತು 148 ಸಿಕ್ಸ್ಗಳನ್ನು ಬಾರಿಸುವ ಮೂಲಕ 902 ಬೌಂಡರಿಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 900 ಬೌಂಡರಿಗಳ ಗಡಿದಾಟಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಶಿಖರ್ ಧವನ್ ಅವರ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು, ಕಿಂಗ್ ಕೊಹ್ಲಿ ಇದುವರೆಗೆ 898 ಬೌಂಡರಿಗಳನ್ನು ಸಿಡಿಸಿದ್ದಾರೆ. ಹಾಗೆಯೇ ಮೂರನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದಾರೆ. ವಾರ್ನರ್ ಈವರೆಗೆ ಒಟ್ಟು 877 ಬೌಂಡರಿಗಳನ್ನು ಬಾರಿಸಿದ್ದಾರೆ.

DC vs PBKS: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬೌಲಿಂಗ್ ಮಾಡಿತು. ಅದರಂತೆ ಮೊದಲು ಬ್ಯಾಟ್ ಬೀಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 19.2 ಓವರ್ಗಳನ್ನು ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು 4 ವಿಕೆಟ್ಗಳ ಜಯ ಸಾಧಿಸಿದೆ.




