IPL 2024: ಐಪಿಎಲ್​ನಲ್ಲಿ ಹೊಸ ಮೈಲುಗಲ್ಲು ದಾಟಿದ ಶಿಖರ್ ಧವನ್

Edited By:

Updated on: Mar 24, 2024 | 6:52 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲೇ 900+ ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಶಿಖರ್ ಧವನ್ ನಿರ್ಮಿಸಿದ್ದಾರೆ. ಅದು ಕೂಡ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಈ ಮೂಲಕ IPL 2024 ರ ಆರಂಭದಲ್ಲೇ ಧವನ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
IPL 2024: ಚಂಡೀಗಢ್​ನ ಮಹಾರಾಜ ಯದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ (Shikhar Dhawan) ಹೊಸ ಮೈಲ್ಲುಗಲ್ಲು ದಾಟಿದ್ದಾರೆ. ಅದು ಕೂಡ ಬೌಂಡರಿಗಳ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಬ್ಯಾಟ್ಸ್​ಮನ್ ಎಂಬ ಹಿರಿಮೆಗೆ ಧವನ್ ಪಾತ್ರರಾಗಿದ್ದಾರೆ.

IPL 2024: ಚಂಡೀಗಢ್​ನ ಮಹಾರಾಜ ಯದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ (Shikhar Dhawan) ಹೊಸ ಮೈಲ್ಲುಗಲ್ಲು ದಾಟಿದ್ದಾರೆ. ಅದು ಕೂಡ ಬೌಂಡರಿಗಳ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಬ್ಯಾಟ್ಸ್​ಮನ್ ಎಂಬ ಹಿರಿಮೆಗೆ ಧವನ್ ಪಾತ್ರರಾಗಿದ್ದಾರೆ.

2 / 5

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಶಿಖರ್ ಧವನ್ 16 ಎಸೆತಗಳಲ್ಲಿ 4 ಫೋರ್​ಗಳೊಂದಿಗೆ 22 ರನ್ ಬಾರಿಸಿದ್ದಾರೆ. ಈ ನಾಲ್ಕು ಫೋರ್​ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 900 ಬೌಂಡರಿಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಶಿಖರ್ ಧವನ್ ತಮ್ಮದಾಗಿಸಿಕೊಂಡಿದ್ದಾರೆ.

3 / 5

ಗಬ್ಬರ್ ಖ್ಯಾತಿಯ ಶಿಖರ್ ಧವನ್ 217 ಐಪಿಎಲ್​ ಇನಿಂಗ್ಸ್​ಗಳಲ್ಲಿ 754 ಫೋರ್​ಗಳು ಮತ್ತು 148 ಸಿಕ್ಸ್​ಗಳನ್ನು ಬಾರಿಸುವ ಮೂಲಕ 902 ಬೌಂಡರಿಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 900 ಬೌಂಡರಿಗಳ ಗಡಿದಾಟಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5

ಶಿಖರ್ ಧವನ್ ಅವರ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು, ಕಿಂಗ್ ಕೊಹ್ಲಿ ಇದುವರೆಗೆ 898 ಬೌಂಡರಿಗಳನ್ನು ಸಿಡಿಸಿದ್ದಾರೆ. ಹಾಗೆಯೇ ಮೂರನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದಾರೆ. ವಾರ್ನರ್ ಈವರೆಗೆ ಒಟ್ಟು 877 ಬೌಂಡರಿಗಳನ್ನು ಬಾರಿಸಿದ್ದಾರೆ.

5 / 5

DC vs PBKS: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬೌಲಿಂಗ್ ಮಾಡಿತು. ಅದರಂತೆ ಮೊದಲು ಬ್ಯಾಟ್ ಬೀಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 19.2 ಓವರ್​ಗಳನ್ನು ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು 4 ವಿಕೆಟ್​ಗಳ ಜಯ ಸಾಧಿಸಿದೆ.

Loading...
Unable to load recommendations.
Follow Us