AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shikhar Dhawan: 2 ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯ..!

IPL 2024: ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡವು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಈ ಮೂಲಕ ಒಟ್ಟು 4 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಪಂದ್ಯಗಳು ಪಂಜಾಬ್ ಪಾಲಿಗೆ ನಿರ್ಣಾಯಕ ಮ್ಯಾಚ್​ಗಳಾಗಿವೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 15, 2024 | 12:03 PM

Share
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ (Shikhar Dhawan) ಮುಂದಿನ 2 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಭುಜದ ನೋವಿನ ಕಾರಣ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಧವನ್ ಮುಂಬರುವ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.

1 / 6
ಪ್ರಸ್ತುತ ಮಾಹಿತಿ ಪ್ರಕಾರ, ಶಿಖರ್ ಧವನ್ ಕನಿಷ್ಠ ಏಳರಿಂದ ಹತ್ತು ದಿನಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಇದರ ನಡುವೆ ಪಂಜಾಬ್ ಕಿಂಗ್ಸ್ ತಂಡವು 2 ಪಂದ್ಯಗಳನ್ನಾಡಲಿದ್ದು, ಈ ಪಂದ್ಯಗಳಿಗೆ PBKS ತಂಡದ ನಾಯಕ ಅಲಭ್ಯರಾಗುವುದು ಬಹುತೇಕ ಖಚಿತ.

2 / 6
ಹೀಗಾಗಿ ಏಪ್ರಿಲ್ 18 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಏಪ್ರಿಲ್ 21 ರಂದು ಜರುಗಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಕಾಣಿಸಿಕೊಳ್ಳುವುದಿಲ್ಲ.

3 / 6
ಇನ್ನು ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಪಂಜಾಬ್ ಕಿಂಗ್ಸ್​ ತಂಡವನ್ನು ಹಂಗಾಮಿ ನಾಯಕ ಸ್ಯಾಮ್ ಕರನ್ ಮುನ್ನಡೆಸಲಿದ್ದಾರೆ. ಅದರಂತೆ ಯುವ ಆಲ್​ರೌಂಡರ್ ಮುಂದಾಳತ್ವದಲ್ಲಿ ಪಂಜಾಬ್ ಕಿಂಗ್ಸ್ ಮುಂದಿನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ.

4 / 6
ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡವು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಈ ಮೂಲಕ ಒಟ್ಟು 4 ಅಂಕಗಳನ್ನು ಹೊಂದಿರುವ ಪಂಜಾಬ್ ಪಡೆ -0.218 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

5 / 6
ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಪ್ರಭ್​ಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಸಿಕಂದರ್ ರಾಝ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್, ತನಯ್ ತ್ಯಾಗರಾಜನ್, ನಾಥನ್ ಎಲ್ಲಿಸ್, ರಾಹುಲ್ ಚಹರ್, ವಿಧ್ವತ್ ಕಾವೇರಪ್ಪ, ಲಿಯಾಮ್ ಲಿವಿಂಗ್‌ಸ್ಟೋನ್, ರಿಲೀ ರೊಸ್ಸೊ, ಹರ್‌ಪ್ರೀತ್ ಸಿಂಗ್ ಭಾಟಿಯಾ, ಕ್ರಿಸ್ ವೋಕ್ಸ್, ರಿಷಿ ಧವನ್, ಅಥರ್ವ ಟೈಡೆ, ಶಿವಂ ಸಿಂಗ್, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್.

6 / 6
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್

ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್

Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು