AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹಾರ್ದಿಕ್ ಪಾಂಡ್ಯರ ಚಿಂತೆ ಹೆಚ್ಚಿಸಿದ ಶಿವಂ ದುಬೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ipl 2024) ಮೊದಲೆರಡು ಪಂದ್ಯಗಳಲ್ಲೇ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಿವಂ ದುಬೆ ತಮ್ಮ ಅಬ್ಬರ ಶುರು ಮಾಡಿದ್ದಾರೆ. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವುದನ್ನು ಎದುರು ನೋಡುತ್ತಿದ್ದಾರೆ. ಇತ್ತ ದುಬೆ ದರ್ಬಾರ್​ನೊಂದಿಗೆ ಅತ್ತ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಅಲುಗಾಡಲಾರಂಭಿಸಿದೆ.

TV9 Web
| Edited By: |

Updated on: Mar 27, 2024 | 9:03 AM

Share
IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟೋಟಕ ಬ್ಯಾಟರ್ ಶಿವಂ ದುಬೆ (Shivam Dube) ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ. ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 34 ರನ್ ಬಾರಿಸಿದ್ದ ದುಬೆ, ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

1 / 8
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದುಬೆ 23 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 51 ರನ್ ಬಾರಿಸಿ ಅಬ್ಬರಿಸಿದ್ದಾರೆ. ಈ ಮೂಲಕ ತಮ್ಮ ಭರ್ಜರಿ ಫಾರ್ಮ್​ ಅನ್ನು ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ.

2 / 8
ಇದಕ್ಕೂ ಮುನ್ನ ಜನವರಿಯಲ್ಲಿ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ದುಬೆ, ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 60 ರನ್​ ಬಾರಿಸಿ ಮಿಂಚಿದ್ದರು. ಅಲ್ಲದೆ ಅಫ್ಘಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 63 ರನ್ ಚಚ್ಚಿದ್ದರು. ಇದಲ್ಲದೆ ಎರಡು ಪಂದ್ಯಗಳಿಂದ 2 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದರು.

3 / 8
ಈ ಮೂಲಕ ಶಿವಂ ದುಬೆ ತಮ್ಮ ಆಲ್​ರೌಂಡರ್ ಆಟದೊಂದಿಗೆ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಐಪಿಎಲ್​ನಲ್ಲೂ ಸಂಚಲನ ಸೃಷ್ಟಿಸುವ ಮೂಲಕ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

4 / 8
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಒಂದು ವೇಳೆ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ವಿಫಲರಾದರೆ ಶಿವಂ ದುಬೆಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.

5 / 8
ಏಕೆಂದರೆ ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಪಾಂಡ್ಯ ಫಿಟ್​ನೆಸ್ ಸಮಸ್ಯೆಯ ಕಾರಣ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ.

6 / 8
ಆದರೆ ಅದಕ್ಕೂ ಮುನ್ನವೇ ಇತ್ತ ಶಿವಂ ದುಬೆ ಅಬ್ಬರ ಶುರು ಮಾಡಿದ್ದಾರೆ. ಮೊದಲ ಎರಡು ಪಂದ್ಯಗಳಲ್ಲೇ 6 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಲ ಹೆಚ್ಚಿಸಬಲ್ಲೇ ಎಂಬುದನ್ನು ಸಾರಿ ಹೇಳಿದ್ದಾರೆ.

7 / 8
ಶಿವಂ ದುಬೆ ಈ ಅದ್ಭುತ ಪ್ರದರ್ಶನವನ್ನು ಹೀಗೆ ಮುಂದುವರೆಸಿದರೆ, ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ. ಒಟ್ಟಿನಲ್ಲಿ ದುಬೆ ದರ್ಬಾರ್​ನೊಂದಿಗೆ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಪಾಲಿಗೆ ಖಾಯಂ ಆಗಿದ್ದ ಆಲ್​ರೌಂಡರ್ ಸ್ಥಾನ ಅಲುಗಾಡಲಾರಂಭಿಸಿದಂತು ನಿಜ.

8 / 8