IPL 2024: ಕ್ಯಾಪ್ಟನ್ ಗಿಲ್ಗೆ 12 ಲಕ್ಷ ರೂ. ದಂಡ..!
TV9 Web | Updated By: ಝಾಹಿರ್ ಯೂಸುಫ್
Updated on:
Mar 27, 2024 | 11:57 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 17ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್ಗಳಿಂದ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಇದೀಗ ಗುಜರಾತ್ ತಂಡದ ನಾಯಕ ಶುಭ್ಮನ್ ಗಿಲ್ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಈ ಮೂಲಕ ಈ ಬಾರಿ ಐಪಿಎಲ್ನಲ್ಲಿ ಸ್ಲೋ ಓವರ್ ರೇಟ್ ಶಿಕ್ದೆಗೆ ಗುರಿಯಾದ ಮೊದಲ ನಾಯಕ ಎನಿಸಿಕೊಂಡಿದ್ದಾರೆ.
1 / 5
IPL 2024 : ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ (Shubman Gill) ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.
2 / 5
ಅದರಂತೆ ಶುಭ್ಮನ್ ಗಿಲ್ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ.
3 / 5
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
4 / 5
ಇನ್ನು ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.
5 / 5
ಇದೀಗ ನಾಯಕನಾಗಿ ತಮ್ಮ 2ನೇ ಪಂದ್ಯದಲ್ಲೇ ಶುಭ್ಮನ್ ಗಿಲ್ ಸ್ಲೋ ಓವರ್ ರೇಟ್ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆವಹಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಈ ತಪ್ಪು ಇನ್ನೆರಡು ಬಾರಿ ಪುನರಾವರ್ತನೆಯಾದರೆ ಗಿಲ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.