AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: SRH vs LSG ಪಂದ್ಯದಲ್ಲಿ ಯಾರು ಗೆದ್ದರೆ RCBಗೆ ಪ್ಲಸ್ ಪಾಯಿಂಟ್

IPL 2024 SRH vs LSG: ಐಪಿಎಲ್​ ಸೀಸನ್ 17 ರ 57ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಕೂಡ ಆರ್​ಸಿಬಿ ಪಾಲಿಗೆ ತುಂಬಾ ಮಹತ್ವದೆನಿಸಿಕೊಂಡಿದೆ.

TV9 Web
| Edited By: |

Updated on: May 08, 2024 | 9:52 AM

Share
ಐಪಿಎಲ್​ನ (IPL 2024) 57ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದೆ.

1 / 6
ಇದರ ನಡುವೆ ಈ ಪಂದ್ಯದಲ್ಲಿ ಯಾರು ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಉತ್ತಮ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಏಕೆಂದರೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆಫ್ ಪ್ರವೇಶವನ್ನು ಎದುರು ನೋಡುತ್ತಿದ್ದು, ಹೀಗಾಗಿ ಉಳಿದ ತಂಡಗಳ ಫಲಿತಾಂಶ ಕೂಡ RCB ಪಾಲಿಗೆ ಇಲ್ಲಿ ಮುಖ್ಯವಾಗುತ್ತದೆ.

2 / 6
ಅದರಂತೆ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಸಿಬಿ ಪಾಲಿಗೆ ಎಸ್​ಆರ್​ಹೆಚ್ ಗೆಲ್ಲುವುದು ಉತ್ತಮ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಈಗಾಗಲೇ 12 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ. ಎಲ್​ಎಸ್​ಜಿ ವಿರುದ್ಧ ಗೆದ್ದರೆ 14 ಪಾಯಿಂಟ್ಸ್​ನೊಂದಿಗೆ 3ನೇ ಸ್ಥಾನಕ್ಕೇರಲಿದೆ.

3 / 6
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು 12 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಪ್ಲೇಆಫ್ ಪ್ರವೇಶಿಸುವ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಎಲ್​ಎಸ್​ಜಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.371 ನಲ್ಲಿದೆ.

4 / 6
ಇದರ ನಡುವೆ ಆರ್​ಸಿಬಿ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಹಿಂದಿಕ್ಕಿ 12 ಅಂಕಗಳೊಂದಿಗೆ 5ನೇ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಇಂದಿನ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಗೆಲ್ಲುವುದು ಉತ್ತಮ.

5 / 6
ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಗೆಲುವನ್ನು ಆರ್​ಸಿಬಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

6 / 6
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!