IPL 2024: SRH vs LSG ಪಂದ್ಯದಲ್ಲಿ ಯಾರು ಗೆದ್ದರೆ RCBಗೆ ಪ್ಲಸ್ ಪಾಯಿಂಟ್
TV9 Web | Updated By: ಝಾಹಿರ್ ಯೂಸುಫ್
Updated on:
May 08, 2024 | 9:52 AM
IPL 2024 SRH vs LSG: ಐಪಿಎಲ್ ಸೀಸನ್ 17 ರ 57ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಹೈದರಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಕೂಡ ಆರ್ಸಿಬಿ ಪಾಲಿಗೆ ತುಂಬಾ ಮಹತ್ವದೆನಿಸಿಕೊಂಡಿದೆ.
1 / 6
ಐಪಿಎಲ್ನ (IPL 2024) 57ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದೆ.
2 / 6
ಇದರ ನಡುವೆ ಈ ಪಂದ್ಯದಲ್ಲಿ ಯಾರು ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಉತ್ತಮ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಏಕೆಂದರೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್ಸಿಬಿ ಪ್ಲೇಆಫ್ ಪ್ರವೇಶವನ್ನು ಎದುರು ನೋಡುತ್ತಿದ್ದು, ಹೀಗಾಗಿ ಉಳಿದ ತಂಡಗಳ ಫಲಿತಾಂಶ ಕೂಡ RCB ಪಾಲಿಗೆ ಇಲ್ಲಿ ಮುಖ್ಯವಾಗುತ್ತದೆ.
3 / 6
ಅದರಂತೆ ಸನ್ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಮುಖಾಮುಖಿಯಲ್ಲಿ ಆರ್ಸಿಬಿ ಪಾಲಿಗೆ ಎಸ್ಆರ್ಹೆಚ್ ಗೆಲ್ಲುವುದು ಉತ್ತಮ. ಏಕೆಂದರೆ ಸನ್ರೈಸರ್ಸ್ ಹೈದರಾಬಾದ್ ತಂಡವು ಈಗಾಗಲೇ 12 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 4ನೇ ಸ್ಥಾನದಲ್ಲಿದೆ. ಎಲ್ಎಸ್ಜಿ ವಿರುದ್ಧ ಗೆದ್ದರೆ 14 ಪಾಯಿಂಟ್ಸ್ನೊಂದಿಗೆ 3ನೇ ಸ್ಥಾನಕ್ಕೇರಲಿದೆ.
4 / 6
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು 12 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಒಂದು ವೇಳೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಪ್ಲೇಆಫ್ ಪ್ರವೇಶಿಸುವ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಎಲ್ಎಸ್ಜಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.371 ನಲ್ಲಿದೆ.
5 / 6
ಇದರ ನಡುವೆ ಆರ್ಸಿಬಿ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಹಿಂದಿಕ್ಕಿ 12 ಅಂಕಗಳೊಂದಿಗೆ 5ನೇ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಹೀಗಾಗಿ ಆರ್ಸಿಬಿ ಪಾಲಿಗೆ ಇಂದಿನ ಪಂದ್ಯದಲ್ಲಿ ಎಸ್ಆರ್ಹೆಚ್ ತಂಡ ಗೆಲ್ಲುವುದು ಉತ್ತಮ.
6 / 6
ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದಲ್ಲಿ ಎಸ್ಆರ್ಹೆಚ್ ತಂಡ ಗೆಲುವನ್ನು ಆರ್ಸಿಬಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.