IPL 2024: ಹೈದರಾಬಾದ್​ನಲ್ಲಿ ಭಾರೀ ಮಳೆ: SRH-LSG ತಂಡಗಳಿಗೆ ಹೊಸ ಚಿಂತೆ ಶುರು

IPL 2024 SRH vs LSG: ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಲಾಗುತ್ತದೆ. ಇದರಿಂದ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಹಿಂದೆ ಉಳಿಯಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: May 07, 2024 | 9:22 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 57ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡಿಯನ್ನುಂಟು ಮಾಡುವ ಸಾಧ್ಯತೆಯಿದೆ.

1 / 6
ಏಕೆಂದರೆ ಮಂಗಳವಾರ ಸಂಜೆಯಿಂದ ಹೈದರಾಬಾದ್​ನಾದ್ಯಂತ ಭಾರೀ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ರಾಜೀವ್ ಗಾಂಧಿ ಮೈದಾನದಲ್ಲಿ ನೀರು ನಿಂತಿದೆ. ಈ ಮಳೆಯು ರಾತ್ರಿವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

2 / 6
ಹಾಗೆಯೇ ನಾಳೆ ಸಂಜೆಯಿಂದ ಮತ್ತೆ ಮಳೆಯಾಗಲಿದ್ದು, ರಾತ್ರಿ ವೇಳೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯಕ್ಕೆ ವರುಣ ಅವಕೃಪೆ ತೋರುವ ಸಾಧ್ಯತೆ ಹೆಚ್ಚಿದೆ.

3 / 6
ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ತುಂಬಾ ಮಹತ್ವದ್ದು. ಏಕೆಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿರುವ ಎಸ್​ಆರ್​ಹೆಚ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಮುಂದಿನ ಮೂರು ಪಂದ್ಯಗಳಲ್ಲೂ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ.

4 / 6
ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮಲೇಬೇಕು. ಅತ್ತ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಕೂಡ ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ ಮಾತ್ರ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

5 / 6
ಅಂದರೆ ಪ್ಲೇಆಫ್​ ರೇಸ್​ನಲ್ಲಿ ಮುಂದಿನ ಹಂತಕ್ಕೆ ಹೋಗಲು ಉಭಯ ತಂಡಗಳಿಗೂ ನಾಳಿನ (ಮೇ 8) ಪಂದ್ಯದಲ್ಲಿ ಗೆಲ್ಲಲೇಬೇಕು. ಇದರ ನಡುವೆ ಹೈದರಾಬಾದ್​ನಾದ್ಯಂತ ಭಾರೀ ಮಳೆಯಾಗುತ್ತಿರುವುದು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಚಿಂತೆಯನ್ನು ಹೆಚ್ಚಿಸಿದೆ.

6 / 6
Follow us
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ