Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಂಗಲ್, ಸಿಂಗಲ್, ಸಿಂಗಲ್: ಕೊಹ್ಲಿ ಸ್ವಲ್ಪ ಧೈರ್ಯ ಮಾಡಿ ಹೊಡಿ: ಸುನಿಲ್ ಗವಾಸ್ಕರ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 206 ರನ್​ಗಳ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 171 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ 35 ರನ್​ಗಳ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 27, 2024 | 10:22 AM

ಐಪಿಎಲ್​ನ (IPL 2024) 41ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ವಿರಾಟ್ ಕೊಹ್ಲಿ (Virat Kohli) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 43 ಎಸೆತಗಳನ್ನು ಎದುರಿಸಿದ ಕೊಹ್ಲಿ 51 ರನ್ ಬಾರಿಸಿದ್ದರು. ಈ ನಿಧಾನಗತಿಯ ಹಾಫ್ ಸೆಂಚುರಿಯಿಂದಾಗಿ ಕೊಹ್ಲಿ ಭಾರೀ ಟೀಕೆಗೆ ಗುರಿಯಾಗಿದ್ದರು.

1 / 5
ಇದೀಗ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಇನಿಂಗ್ಸ್​ನಲ್ಲಿ ಬರೀ ಸಿಂಗಲ್​ಗಳೇ ಕಾಣಿಸಿದ್ದವು. ಸಿಂಗಲ್, ಸಿಂಗಲ್, ಸಿಂಗಲ್... ಹೀಗೆ ಒಂದೊಂದು ರನ್​ ಕಲೆಹಾಕುತ್ತಾ ಇನಿಂಗ್ಸ್ ಕಟ್ಟಬೇಕಾದ ಅವಶ್ಯಕತೆ ಇರಲಿಲ್ಲ. ಇದಾಗ್ಯೂ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಅಚ್ಚರಿ ಮೂಡಿಸಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

2 / 5
ಮಹಿಪಾಲ್ ಲೋಮ್ರರ್, ದಿನೇಶ್ ಕಾರ್ತಿಕ್ ಅವರಂತಹ ಬಿಗ್ ಹಿಟ್ಟರ್​ಗಳು ಬ್ಯಾಟಿಂಗ್​ಗೆ​ ಬರಬೇಕಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಬಹುದಿತ್ತು. ಕೊಹ್ಲಿ ಸ್ವಲ್ಪ ರಿಸ್ಕ್​ ತೆಗೆದುಕೊಂಡು ಧೈರ್ಯದಿಂದ ಆಡಬೇಕು ಎಂದು ಸುನಿಲ್ ಗವಾಸ್ಕರ್ ಕಿವಿಮಾತು ಹೇಳಿದ್ದಾರೆ.

3 / 5
ನೀವೇ ನೋಡಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಅರ್ಧಶತಕ ಪೂರೈಸಲು 37 ಎಸೆತಗಳನ್ನು ತೆಗೆದುಕೊಂಡಿದ್ದರು. ಇದೇ ವೇಳೆ ರಜತ್ ಪಾಟಿದಾರ್ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಬ್ಯಾಟರ್​ಗಳು ರಿಸ್ಕ್​ ತೆಗೆದುಕೊಳ್ಳದ ಹೊರತು ಆಕ್ರಮಕಾರಿ ಆಟ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ. ಈ ಮೂಲಕ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮೊದಲ 18 ಎಸೆತಗಳಲ್ಲಿ 32 ರನ್ ಬಾರಿಸಿ ಅಬ್ಬರಿಸಿದ್ದರು. ಆದರೆ ಪವರ್​ಪ್ಲೇ ಮುಕ್ತಾಯವಾಗುತ್ತಿದ್ದಂತೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮುಂದಿನ 25 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 19 ರನ್​ಗಳು ಮಾತ್ರ. ಹೀಗಾಗಿಯೇ ಆರ್​ಸಿಬಿ ಬೃಹತ್ ಮೊತ್ತ ಪೇರಿಸಬೇಕಿದ್ದರೆ ಕೊಹ್ಲಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಬೇಕೆಂದು ಸುನಿಲ್ ಗವಾಸ್ಕರ್ ಒತ್ತಿ ಹೇಳಿದ್ದಾರೆ.

5 / 5
Follow us
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ

ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ

ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ

ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ