2012 ರಿಂದ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಸುನಿಲ್ ನರೈನ್ ಇದುವರೆಗೆ 168 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 1322 ರನ್ ಕಲೆಹಾಕಿದ್ದಾರೆ. ಹಾಗೆಯೇ 170 ವಿಕೆಟ್ಗಳನ್ನು ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ 100+ ವಿಕೆಟ್ಸ್ ಜೊತೆ ಶತಕ ಸಿಡಿಸಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.