IPL 2024: ಸೂರ್ಯನ ಸಿಡಿಲಬ್ಬರಕ್ಕೆ ಹಳೆಯ ದಾಖಲೆಗಳು ಉಡೀಸ್

Suryakumar Yadav Century: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಎಸ್​ಆರ್​ಹೆಚ್​ ವಿರುದ್ಧದ ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ 6 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 102 ರನ್ ಬಾರಿಸಿ ಮಿಂಚಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:May 07, 2024 | 3:23 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 55ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ (Suryakumar Yadav) ಹಲವು ದಾಖಲೆಗಳನ್ನು ಬರೆದಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 173 ರನ್​ ಕಲೆಹಾಕಿತು.

1 / 8
ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ (102) ಅಜೇಯ ಶತಕ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 7 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡರು. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 8
1- ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಶತಕದೊಂದಿಗೆ ಮುಂಬೈ ಇಂಡಿಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಅತೀ ಹೆಚ್ಚು ಸೆಂಚುರಿ ಸಿಡಿಸಿದ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೂರ್ಯ ಸೆಂಚುರಿ ಬಾರಿಸಿದ್ದರು. ಇದೀಗ ಎಸ್​ಆರ್​ಹೆಚ್ ವಿರುದ್ಧ ಕೂಡ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ.

3 / 8
2- ಮುಂಬೈ ಇಂಡಿಯನ್ಸ್ ಪರ 2 ಶತಕ ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ. ಸೂರ್ಯ ಐಪಿಎಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ.

4 / 8
3- ಟಿ20 ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತೀ ಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಕೂಡ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಸೂರ್ಯ ಈವರೆಗೆ ಒಟ್ಟು 4 ಶತಕ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಈ ಪಟ್ಟಿಯಲ್ಲಿ 5 ಶತಕ ಬಾರಿಸಿರುವ ಗ್ಲೆನ್ ಮ್ಯಾಕ್ಸ್​ವೆಲ್ ಅಗ್ರಸ್ಥಾನದಲ್ಲಿದ್ದಾರೆ.

5 / 8
4- ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 9 ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, 8 ಶತಕದೊಂದಿಗೆ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 6 ಸೆಂಚುರಿಗಳೊಂದಿಗೆ ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನಕ್ಕೇರಿದ್ದಾರೆ.

6 / 8
5- ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಸೆಂಚುರಿಯೊಂಧಿಗೆ ಸೂರ್ಯಕುಮಾರ್ ಯಾದವ್ ಐಪಿಎಲ್​ನಲ್ಲಿ 3500+ ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ರನ್ ಸರದಾರರ ಪಟ್ಟಿಯಲ್ಲಿ ಸೂರ್ಯ 19ನೇ ಸ್ಥಾನಕ್ಕೇರಿದ್ದಾರೆ.

7 / 8
ಒಟ್ಟಿನಲ್ಲಿ ಒಂದು ಭರ್ಜರಿ ಸೆಂಚುರಿಯೊಂದಿಗೆ ಸೂರ್ಯಕುಮಾರ್ ಯಾದವ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ ಭರ್ಜರಿ ಫಾರ್ಮ್​ ಪ್ರದರ್ಶಿಸಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್-ಯುಎಸ್​​ಎನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಸೂರ್ಯನ ಕಡೆಯಿಂದ ಜಬರ್​ದಸ್ತ್ ಬ್ಯಾಟಿಂಗ್ ನಿರೀಕ್ಷಿಸಬಹುದು.

8 / 8

Published On - 3:22 pm, Tue, 7 May 24

Follow us
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ