IPL 2024: ಸೂರ್ಯಕುಮಾರ್ ಸಿಕ್ಸರ್ ದಾಖಲೆ
TV9 Web | Updated By: ಝಾಹಿರ್ ಯೂಸುಫ್
Updated on:
Apr 28, 2024 | 12:30 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 43ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 257 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 247 ರನ್ಗಳಿಸಿ 10 ರನ್ಗಳಿಂದ ಸೋಲೊಪ್ಪಿಕೊಂಡಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 43ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) 2 ಭರ್ಜರಿ ಸಿಕ್ಸ್ ಸಿಡಿಸಿ ಮಿಂಚಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯ 13 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್ನೊಂದಿಗೆ 26 ರನ್ ಬಾರಿಸಿ ಔಟಾಗಿದ್ದರು.
2 / 5
ಈ ಎರಡು ಸಿಕ್ಸ್ಗಳೊಂದಿಗೆ ಮುಂಬೈ ಇಂಡಿಯನ್ಸ್ ಪರ 100 ಸಿಕ್ಸ್ಗಳನ್ನು ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಸೂರ್ಯಕುಮಾರ್ ಯಾದವ್ ಸೇರ್ಪಡೆಯಾದರು. ಅಲ್ಲದೆ ಈ ಸಾಧನೆ ಮಾಡಿದ ಮುಂಬೈ ತಂಡದ 5ನೇ ಬ್ಯಾಟರ್ ಎನಿಸಿಕೊಂಡರು.
3 / 5
ಇದಕ್ಕೂ ಮುನ್ನ ರೋಹಿತ್ ಶರ್ಮಾ (224), ಕೀರನ್ ಪೊಲಾರ್ಡ್ (223), ಇಶಾನ್ ಕಿಶನ್ (103), ಮತ್ತು ಹಾರ್ದಿಕ್ ಪಾಂಡ್ಯ (105) ಮಾತ್ರ ಮುಂಬೈ ಇಂಡಿಯನ್ಸ್ ಪರ ನೂರಕ್ಕಿಂತ ಅಧಿಕ ಸಿಕ್ಸ್ ಬಾರಿಸಿದ್ದಾರೆ. ಇದೀಗ ಈ ಪಟ್ಟಿಗೆ ಐದನೇ ಬ್ಯಾಟ್ಸ್ಮನ್ ಆಗಿ ಸೂರ್ಯಕುಮಾರ್ ಯಾದವ್ ಎಂಟ್ರಿ ಕೊಟ್ಟಿದ್ದಾರೆ.
4 / 5
2018 ರಿಂದ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿರುವ ಸೂರ್ಯಕುಮಾರ್ ಯಾದವ್, ಈವರೆಗೆ 2,807 ರನ್ ಕಲೆಹಾಕಿದ್ದಾರೆ. ಅಲ್ಲದೆ ಕಳೆದ ಸೀಸನ್ನಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 605 ರನ್ ಬಾರಿಸಿದ್ದರು.
5 / 5
ವಿಶೇಷ ಎಂದರೆ ಸಚಿನ್ ತೆಂಡೂಲ್ಕರ್ ಬಳಿಕ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಸೀಸನ್ವೊಂದರಲ್ಲಿ 600 ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಸೂರ್ಯಕುಮಾರ್ ಹೆಸರಿನಲ್ಲಿದೆ. ಸಚಿನ್ 2010 ರಲ್ಲಿ 618 ರನ್ ಬಾರಿಸಿ ಈ ಸಾಧನೆ ಮಾಡಿದರೆ, ಸೂರ್ಯಕುಮಾರ್ ಯಾದವ್ ಐಪಿಎಲ್ 2023 ರಲ್ಲಿ 605 ರನ್ ಸಿಡಿಸಿ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನು ಈ ಬಾರಿಯ ಐಪಿಎಲ್ನಲ್ಲಿ 6 ಇನಿಂಗ್ಸ್ ಆಡಿರುವ ಸೂರ್ಯ ಇದುವರೆಗೆ 166 ರನ್ ಕಲೆಹಾಕಿದ್ದಾರೆ.