ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತಪಡಿಸಲು ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿಯ ಐಪಿಎಲ್ (IPL 2024) ಆಡಲು ಸೂರ್ಯನಿಗೆ ಇನ್ನೂ ಸಹ ಕ್ಲಿಯರೆನ್ಸ್ ನೀಡಲಾಗಿಲ್ಲ.
ಬಿಸಿಸಿಐ ನಿಯಮದ ಪ್ರಕಾರ, ಟೀಮ್ ಇಂಡಿಯಾ ಆಟಗಾರರು ಗಾಯಗೊಂಡ ಬಳಿಕ ಐಪಿಎಲ್ ಆಡಬೇಕಿದ್ದರೆ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಪ್ರಮಾಣಪತ್ರವನ್ನು ಪಡೆಯಬೇಕು. ಅದರಂತೆ ಇದೀಗ ಫಿಟ್ನೆಸ್ ಟೆಸ್ಟ್ನಲ್ಲಿ ಭಾಗವಹಿಸಿರುವ ಸೂರ್ಯ ಮೊದಲ ಅವಕಾಶದಲ್ಲಿ ವಿಫಲರಾಗಿದ್ದಾರೆ.
ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರು. ಆ ಬಳಿಕ ಸರ್ಜರಿಗೆ ಒಳಗಾಗಿದ್ದ ಸೂರ್ಯ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ತಿಂಗಳುಗಳ ಬಳಿಕ ಕಂಬ್ಯಾಕ್ ಮಾಡಲು ಸಜ್ಜಾಗಿರುವ ಸೂರ್ಯಕುಮಾರ್ ಯಾದವ್ ಎನ್ಸಿಎ ನಲ್ಲಿ ಫಿಟ್ನೆಸ್ ಟೆಸ್ಟ್ಗೆ ಒಳಗಾಗಿದ್ದಾರೆ.
ಸದ್ಯ ಮೊದಲ ಸುತ್ತಿನಲ್ಲಿ ವಿಫಲರಾಗಿರುವ ಸೂರ್ಯಕುಮಾರ್ ಯಾದವ್ ಗುರುವಾರ (ಮಾ.21) ಮತ್ತೊಮ್ಮೆ ಫಿಟ್ನೆಸ್ ಟೆಸ್ಟ್ಗೆ ಒಳಗಾಗಲಿದ್ದಾರೆ. ಈ ವೇಳೆ ಕೂಡ ಫೇಲ್ ಆದರೆ ಐಪಿಎಲ್ನ ಮೊದಲಾರ್ಧದ ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ.
ಹೀಗಾಗಿ ಗುರುವಾರ ನಡೆಯಲಿರುವ ಫಿಟ್ನೆಸ್ ಟೆಸ್ಟ್ ಸೂರ್ಯಕುಮಾರ್ ಯಾದವ್ ಅವರ ಐಪಿಎಲ್ ಭವಿಷ್ಯ ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು. ಅದರಂತೆ ಕ್ಲಿಯರೆನ್ಸ್ ಪಡೆದು ಸೂರ್ಯ ಮುಂಬೈ ಪರ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ಪಿಯೂಷ್ ಚಾವ್ಲಾ, ರೊಮಾರಿಯೊ ಶೆಫರ್ಡ್, ಜೆರಾಲ್ಡ್ ಕೋಟ್ಝಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ಅನ್ಶುಲ್ ಕಾಂಬೋಜ್, ನಮನ್ ಧೀರ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ, ಲ್ಯೂಕ್ ವುಡ್.