AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರಂಭಿಕ ಪಂದ್ಯಗಳಿಗೆ ಸ್ಟಾರ್ ಆಟಗಾರ ಅಲಭ್ಯ: ಮುಂಬೈ ಇಂಡಿಯನ್ಸ್​​ಗೆ ಹೊಸ ಚಿಂತೆ ಶುರು..!

IPL 2024 Mumbai Indians: ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಅಲ್ಲದೆ ರೋಹಿತ್ ಶರ್ಮಾ ಬದಲಿಗೆ ಹೊಸ ನಾಯಕನಾಗಿ ಪಾಂಡ್ಯರನ್ನು ಆಯ್ಕೆ ಮಾಡಲಾಗಿದೆ.

TV9 Web
| Edited By: |

Updated on:Jan 08, 2024 | 1:55 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

1 / 6
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಿರುವ ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್ ಆಗಿಲ್ಲ ಎಂದು ವರದಿಯಾಗಿದೆ.

2 / 6
ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದ ಮೊದಲ ಎರಡು ಪಂದ್ಯಗಳಿಂದ ಸೂರ್ಯಕುಮಾರ್ ಯಾದವ್ ಹೊರಗುಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಇದಾಗ್ಯೂ ಮೂರನೇ ಪಂದ್ಯಕ್ಕೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಸೂರ್ಯಕುಮಾರ್ ಯಾದವ್ ಸದ್ಯ ಫಿಟ್​ನೆಸ್​ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಖಂಡಿತವಾಗಿಯೂ ಅವರು ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಕ್ಕೂ ಮುನ್ನ NCA ಅವರಿಗೆ ಅನುಮತಿ ನೀಡುವುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

4 / 6
ಅದರಂತೆ ಸೂರ್ಯಕುಮಾರ್ ಯಾದವ್ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದು, ಇದು ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿ. ಈ ಹಿನ್ನಡೆಯನ್ನು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಹೇಗೆ ಸರಿದೂಗಿಸಲಿದೆ ಎಂಬುದನ್ನು ಕಾದು ನೋಡೇಬೇಕಷ್ಟೇ.

5 / 6
ಮುಂಬೈ ಇಂಡಿಯನ್ಸ್ ತಂಡ​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

6 / 6

Published On - 1:52 pm, Mon, 8 January 24

Web contact
Web contact

TV9 Kannada

Read More
Follow Us
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ