2008 ರಿಂದ ಐಪಿಎಲ್​ನಲ್ಲಿದ್ದರೂ RCB ಆಟಗಾರ ಆಡಿದ್ದು ಕೇವಲ 7 ಪಂದ್ಯ..!

IPL 2024 RCB: ಈ ಬಾರಿ ಐಪಿಎಲ್ ಮಿನಿ ಆಕ್ಷನ್​ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿತ್ತು. ಅಷ್ಟೇ ಅಲ್ಲದೆ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಿತ್ತು. ಈ ಆಟಗಾರರಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕಿಲ್ಲ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Dec 26, 2023 | 2:57 PM

ಈ ಬಾರಿಯ ಐಪಿಎಲ್ ಹರಾಜಿನ ಮೂಲಕ RCB ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಸ್ವಪ್ನಿಲ್ ಸಿಂಗ್ ಕೂಡ ಒಬ್ಬರು. ಉತ್ತರ ಪ್ರದೇಶ ಮೂಲದ 32 ವರ್ಷದ ಸ್ವಪ್ನಿಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 20 ಲಕ್ಷ ರೂ.ಗೆ ಖರೀದಿಸಿದೆ.

1 / 7
ವಿಶೇಷ ಎಂದರೆ ಸ್ವಪ್ನಿಲ್ ಸಿಂಗ್ ಐಪಿಎಲ್​ಗೆ ಎಂಟ್ರಿ ಕೊಟ್ಟು 16 ವರ್ಷಗಳೇ ಕಳೆದಿವೆ. ಆದರೆ ಆಡಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದು ಕೂಡ ಮೂರು ತಂಡಗಳನ್ನು ಪ್ರತಿನಿಧಿಸಿ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 7
ಅಂದರೆ 2008 ರ ಚೊಚ್ಚಲ ಐಪಿಎಲ್​ನಲ್ಲಿ ಸ್ವಪ್ನಿಲ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ 4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದಾದ ಬಳಿಕ 2016 ರಲ್ಲಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು 10 ಲಕ್ಷ ರೂ. ಗೆ ಸ್ವಪ್ನಿಲ್ ಅವರನ್ನು ಆಯ್ಕೆ ಮಾಡಿಕೊಂಡಿತ್ತು.

3 / 7
ಇನ್ನು 2023 ರ ಹರಾಜಿನಲ್ಲಿ ಸ್ವಪ್ನಿಲ್ ಸಿಂಗ್ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪಾಲಾಗಿದ್ದರು. ಹೀಗೆ ಮೂರು ತಂಡಗಳಲ್ಲಿ ಕಾಣಿಸಿಕೊಂಡಿದ್ದ ಬೌಲಿಂಗ್ ಆಲ್​ರೌಂಡರ್ ಆಡಿರುವ ಒಟ್ಟು ಪಂದ್ಯಗಳ ಸಂಖ್ಯೆ 7.

4 / 7
ಈ ಏಳು ಪಂದ್ಯಗಳಿಂದ ಸ್ವಪ್ನಿಲ್ ಸಿಂಗ್ ಕಲೆಹಾಕಿರುವುದು ಕೇವಲ 14 ರನ್ ಮಾತ್ರ. ಹಾಗೆಯೇ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 75 ಪಂದ್ಯಗಳಿಂದ ಪಡೆದಿರುವುದು 63 ವಿಕೆಟ್​ಗಳು ಮಾತ್ರ. ಇದೇ ವೇಳೆ ಬ್ಯಾಟಿಂಗ್​​ನಲ್ಲಿ ಕಲೆಹಾಕಿದ್ದು 849 ರನ್​ಗಳು.

5 / 7
ಇದಾಗ್ಯೂ ಈ ಬಾರಿ ಆರ್​ಸಿಬಿ ಸ್ಥಳೀಯ ಪ್ರತಿಭೆಗಳಿಗೆ ಮಣೆಹಾಕದೇ 32 ವರ್ಷದ ಆಟಗಾರನಿಗೆ ಅವಕಾಶ ನೀಡಿರುವುದು ಅಚ್ಚರಿಯೇ ಸರಿ. ಈ ಅಚ್ಚರಿಯ ಆಯ್ಕೆ RCB ತಂಡದ ಪಾಲಿಗೆ ಹೇಗೆ ವರವಾಗಲಿದೆ ಎಂಬುದನ್ನು ಕಾದುನೋಡಬೇಕಷ್ಟೇ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow us
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ