IPL 2024 RCB vs RR: ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ 15 ಬಾರಿ ಜಯ ಸಾಧಿಸಿದೆ. ಹಾಗೆಯೇ ರಾಜಸ್ಥಾನ್ ರಾಯಲ್ಸ್ 13 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಈ ಬಾರಿಯ ಎಲಿಮಿನೇಟರ್ ಪಂದ್ಯದಲ್ಲೂ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.